ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟ: 217 ಸ್ಥಾನಗಳಲ್ಲಿ ಪಕ್ಷೇತರರು, 81 ಸ್ಥಾನಗಳಲ್ಲಿ ಬಿಜೆಪಿ ಗೆಲುವು

ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 217 ಸ್ಥಾನಗಳಲ್ಲಿ ಪಕ್ಷೇತರರು ಪಾರುಪತ್ಯೆ ಮೆರೆದಿದ್ದು, 81 ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 217 ಸ್ಥಾನಗಳಲ್ಲಿ ಪಕ್ಷೇತರರು ಪಾರುಪತ್ಯೆ ಮೆರೆದಿದ್ದು, 81 ಸ್ಥಾನಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಕೇಂದ್ರ ಸರ್ಕಾರ 370ನೇ ವಿಧಿ ರದ್ದುಗೊಳಿಸಿದ್ದನ್ನು ಖಂಡಿಸಿ ಕಾಂಗ್ರೆಸ್, ಎನ್ ಸಿ ಮತ್ತು ಪಿಡಿಪಿ ಚುನಾವಣೆ ಬಹಿಷ್ಕರಿಸಿದ್ದರಿಂದ ಪಕ್ಷೇತರರು ಮತ್ತು ಬಿಜೆಪಿ ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು.

ಕಾಶ್ಮೀರದ ಒಟ್ಟು 316 ಬ್ಲಾಕ್ ಅಭಿವೃದ್ಧಿ ಮಂಡಳಿ(ಬಿಡಿಸಿ)ಯ 283 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದ್ದು, 27 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಮೂರು ಕ್ಷೇತ್ರಗಳ ಫಲಿತಾಂಶ ಬಾಕಿ ಇದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಶೈಲೇಂದರ್ ಕುಮಾರ್ ಅವರು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿತ್ತು. ವ್ಯಾಪಕ ಭದ್ರತೆಯ ನಡುವೆ ಮತದಾನ ಶಾಂತಿಯುತವಾಗಿ ಅಂತ್ಯಗೊಂಡಿದ್ದು, ಈ ಚುನಾವಣೆಯಲ್ಲಿ ದಾಖಲೆಯ ಶೇ.98.3ರಷ್ಟು ಮತದಾನವಾಗಿದೆ ಎಂದು ಶೈಲೇಂದರ್ ಕುಮಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com