ಚಿದಂಬರಂ
ದೇಶ
ಐಎನ್ಎಕ್ಸ್ ಮೀಡಿಯಾ ಹಗರಣ: ಚಿದು ಜಾಮೀನು ಅರ್ಜಿ ಕುರಿತು ಇಡಿ ಪ್ರತಿಕ್ರಿಯೆ ಕೇಳಿದ ದೆಹಲಿ 'ಹೈ'
ಬಹುಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಚಿದಂಬರಂ ಜಾಮೀನು ಅರ್ಜಿ ಕುರಿತಂತೆ ದೆಹಲಿ ಹೈಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ.
ನವದೆಹಲಿ: ಬಹುಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಚಿದಂಬರಂ ಜಾಮೀನು ಅರ್ಜಿ ಕುರಿತಂತೆ ದೆಹಲಿ ಹೈಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ.
ಜಾರಿ ನಿರ್ದೇಶನಾಲಯಕ್ಕೆ ನ್ಯಾಯಮೂರ್ತಿ ಸುರೇಶ್ ಕೈತ್ ಅವರು ನೋಟಿಸ್ ಜಾರಿ ಮಾಡಿದ್ದು, ವಾರದೊಳಗಾಗಿ ಚಿದಂಬರಂ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಐಎನ್ಎಕ್ಸ್ ಹಗರಣ ಪ್ರಕರಣವನ್ನು ಜಾರಿ ನಿರ್ದೇಶನಾದ ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರವಷ್ಟೇ ಜಾಮೀನು ನೀಡಿತ್ತು. ಪ್ರಕರಣದ ಮರು ವಿಚಾರಣೆ ನವೆಂಬರ್ 4ಕ್ಕೆ ನಿಗದಿಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ