ಬಿಪಿನ್ ರಾವತ್
ದೇಶ
ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಯೋತ್ಪಾದಕರು ನಿಯಂತ್ರಿಸುತ್ತಿದ್ದಾರೆ: ಸೇನಾ ಮುಖ್ಯಸ್ಥ ರಾವತ್
ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಯೋತ್ಪಾದಕರು ನಿಯಂತ್ರಿಸುತ್ತಿದ್ದಾರೆ ಎಂದು ಭಾರತೀಯ ಸೇನೆಯ ಮಹಾದಂಡನಾಯಕ ಜನರಲ್ ಬಿಪಿನ್ ರಾವತ್ ಶುಕ್ರವಾರ ಹೇಳಿದ್ದಾರೆ.
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಯೋತ್ಪಾದಕರು ನಿಯಂತ್ರಿಸುತ್ತಿದ್ದಾರೆ ಎಂದು ಭಾರತೀಯ ಸೇನೆಯ ಮಹಾದಂಡನಾಯಕ ಜನರಲ್ ಬಿಪಿನ್ ರಾವತ್ ಶುಕ್ರವಾರ ಹೇಳಿದ್ದಾರೆ.
"ಪಾಕ್ ಆಕ್ರಮೈತ ಕಾಶ್ಮೀರವನ್ನು ಭಯೋತ್ಪಾದಕರು ನಿಯಂತ್ರಣದಲ್ಲಿಸಿರಿಕೊಂಡಿದ್ದಾರೆ. ಪಾಕಿಸ್ತಾನವು ಭಾರತ ಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ವಿಚಾರಕ್ಕೆ ಇದನ್ನು ಜೋಡಿಸುತ್ತಿದೆ" ರಾವತ್ ಆರೋಪಿಸಿದ್ದಾರೆ
ನಿಗದಿತ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ರಾವತ್ , ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಪಿಒಕೆಗಳನ್ನು ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದರು.
ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಭಂಗಪಡಿಸುವ ಪ್ರಯತ್ನದಲ್ಲಿ ಪಾಕಿಸ್ತಾನ ತೊಡಗಿಕೊಂಡಿದೆ ಎಂದು ಅವರು ನೆರೆರಾಷ್ಟ್ರವನ್ನು ಟೀಕಿಸಿದರು..
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ