ಭಾರತ ತೊರೆಯಲು ಸಿದ್ಧವಾದ ವೊಡಾಫೋನ್!?
ಭಾರತ ತೊರೆಯಲು ಸಿದ್ಧವಾದ ವೊಡಾಫೋನ್!?

ಭಾರತ ತೊರೆಯಲು ಸಿದ್ಧವಾದ ವೊಡಾಫೋನ್!?

ವಿದೇಶಿ ಟೆಲಿಕಾಂ ಸಂಸ್ಥೆ ವೊಡಾಫೋನ್ ಸಂಸ್ಥೆ ಭಾರತದಲ್ಲಿ ತನ್ನ ಉದ್ಯಮವನ್ನು ತೊರೆಯಲು ಸಜ್ಜುಗೊಂಡಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿತ್ತು.  

ನವದೆಹಲಿ: ವಿದೇಶಿ ಟೆಲಿಕಾಂ ಸಂಸ್ಥೆ ವೊಡಾಫೋನ್ ಸಂಸ್ಥೆ ಭಾರತದಲ್ಲಿ ತನ್ನ ಉದ್ಯಮವನ್ನು ತೊರೆಯಲು ಸಜ್ಜುಗೊಂಡಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿತ್ತು.  

ಐಎಎನ್ಎಸ್ ಈ ಬಗ್ಗೆ ವರದಿಪ್ರಕಟಿಸಿದೆ. ಮಾಧ್ಯಮ ಸಂಸ್ಥೆ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ವೊಡಾಫೋನ್ ಸಂಸ್ಥೆ, ಭಾರತದ ವಹಿವಾಟುಗಳನ್ನು ಅಂತ್ಯಗೊಳಿಸುವ ವಿಚಾರ ಕೇವಲ ಊಹಾಪೋಹ ಎಂದು ಹೇಳಿದೆ. 

ವೊಡಾಫೋನ್-ಐಡಿಯಾ ಜಂಟಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದು, ನಷ್ಟ ಎದುರಿಸುತ್ತಿದೆ, ಪ್ರತಿ ವರ್ಷವೂ ಲಕ್ಷಾಂತರ ಗ್ರಾಹಕರನ್ನು ಕಳೆದುಕೊಳ್ಳುತ್ತಿದೆ ಈ ಹಿನ್ನೆಲೆಯಲ್ಲಿ ವೊಡಾಫೋನ್ ಭಾರತದಲ್ಲಿನ ತನ್ನ ಉದ್ಯಮವನ್ನು ತೊರೆಯಲಿದೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ವೊಡಾಫೋನ್-ಐಡಿಯಾ ಸಂಸ್ಥೆ ಎಲ್ಲಾ ವದಂತಿಗಳನ್ನೂ ನಿರಾಕರಿಸಿದೆ. 

ವೊಡಾಫೋನ್-ಐಡಿಯಾ ಸಂಸ್ಥೆ ತನಗೆ ಸಾಲ ನೀಡಿರುವ ಸಂಸ್ಥೆಗೆ ಸಾಲದ ಬಾಧ್ಯತೆಗಳನ್ನು ಮರುಹಂಚಿಕೆ ಮಾಡಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವೋಡಾಫೋನ್ ಭಾರತ ತೊರೆಯಲು ಮುಂದಾಗಿದೆ ಎಂಬ ವದಂತಿ ಹಬ್ಬಿತ್ತು. 

ಈ ಮಾಹಿತಿಯನ್ನು ತಳ್ಳಿಹಾಕಿರುವ ಸಂಸ್ಥೆ, ನಾವು ಯಾವುದೇ ಮನವಿಯನ್ನೂ ಯಾರಿಗೂ ಮಾಡಿಲ್ಲ. ಎಲ್ಲಾ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಲಿದ್ದೇವೆ ಎಂದು ಹೇಳಿದೆ.

Related Stories

No stories found.

Advertisement

X
Kannada Prabha
www.kannadaprabha.com