ಪ್ರಧಾನಿ ಮೋದಿ ಗೌರವಕ್ಕೆ ಮತ್ತೊಂದು ಗರಿ; ಬಿಲ್ ಗೇಟ್ಸ್ ಫೌಂಡೇಶನ್‌ ಪ್ರಶಸ್ತಿಗೆ ಭಾಜನ

ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಸಂಸ್ಥೆಯಿಂದ ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸ್ವಚ್ಛ ಭಾರತ ಅಭಿಯಾನದಲ್ಲಿ ಪ್ರಧಾನಿ ಮೋದಿ
ಸ್ವಚ್ಛ ಭಾರತ ಅಭಿಯಾನದಲ್ಲಿ ಪ್ರಧಾನಿ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಸಂಸ್ಥೆಯಿಂದ ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಧಾನಿ ಮೋದಿಯವರ ಪರಿಶ್ರಮ ಮತ್ತು ಆಧುನಿಕ ಉಪಕ್ರಮಗಳಿಗೆ ವಿಶ್ವದಾದ್ಯಂತ ಪ್ರಶಸ್ತಿ ಲಭಿಸುತ್ತಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಭೇಟಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಬಿಲ್ ಮೆಲಿಂಡಾ ಗೇಟ್ಸ್ ಫೌಂಡೇಶನ್ ನಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಲೋಕಸಭಾ ಸದಸ್ಯ ಜಿತೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ.

2014 ರಲ್ಲಿ ಪ್ರಧಾನಿ ಮೋದಿ ಅವರು,ಕೇಂದ್ರದಲ್ಲಿ ತಮ್ಮ ಮೊದಲ ಅವಧಿಯಲ್ಲಿ ಪ್ರಾರಂಭಿಸಿದ ಮೊಟ್ಟ ಮೊದಲ ಹಲವು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಸ್ವಚ್ಛ ಭಾರತ ಅಭಿಯಾನ ಅಥವಾ ಕ್ಲೀನ್ ಇಂಡಿಯಾ ಮಿಷನ್ ಸಹ ಒಂದಾಗಿದೆ.

ಅಕ್ಟೋಬರ್ 2, 2014 ರಂದು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯಂದು ಈ ಯೋಜನೆಗೆ ಪ್ರಧಾನಿ ಅವರು ಚಾಲನೆ ನೀಡಿದ್ದರು. ಸ್ವಚ್ಛ ಭಾರತ ಅಭಿಯಾನವು 2019 ರ ವೇಳೆಗೆ ಭಾರತವನ್ನು ಮುಕ್ತ ಬಯಲು ಶೌಚವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದು, 5 ವರ್ಷಗಳಲ್ಲಿ 9 ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಗುರಿಯನ್ನು ಅದು ಹೊಂದಿತ್ತು.

ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ ಬಿಲಿಯನೇರ್ ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಮತ್ತು ಅವರ ಪತ್ನಿ ಮೆಲಿಂಡಾ ಗೇಟ್ಸ್ ಒಡೆತನದ ಪ್ರತಿಷ್ಠಾನವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com