ದೇಶ

ನಾಳೆ ಮತ್ತೆ ಇಡಿ ವಿಚಾರಣೆ:ಇದು ರಾಜಕೀಯ ಪ್ರೇರಿತ ಪ್ರಕರಣ- ಡಿಕೆ ಶಿವಕುಮಾರ್ 

ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಂದು ಕೂಡಾ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ನಾಳೆ ಮತ್ತೆ ಇಡಿ ವಿಚಾರಣೆ:ಇದು ರಾಜಕೀಯ ಪ್ರೇರಿತ ಪ್ರಕರಣ- ಡಿಕೆ ಶಿವಕುಮಾರ್ 
ಡಿಕೆ ಶಿವಕುಮಾರ್
Published On :

ನವ ದೆಹಲಿ: ನೋಟ್ ರದ್ದತಿ ವೇಳೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಇಂದು ಕೂಡಾ ಮೂರನೇ ಬಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಕಳೆದ ಶುಕ್ರವಾರ ಹಾಗೂ ಶನಿವಾರ ಇಡಿ ವಿಚಾರಣೆಗೆ ಹಾಜರಾಗಿದ್ದ ಡಿಕೆ ಶಿವಕುಮಾರ್ ಇಂದು ಬೆಳಗ್ಗೆಯಿಂದಲೂ ರಾತ್ರಿ 8-30ರವರೆಗೂ ಜಾರಿನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಇಡಿ ವಿಚಾರಣೆ ಮುಗಿದ  ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಅವರ ಹೇಳಿಕೆ ವಿರುದ್ಧ ಗರಂ ಆದ ಡಿಕೆ ಶಿವಕುಮಾರ್,  ರಾಜಕೀಯವಾಗಿ ಏನೇ ಬಂದರೂ ಧೈರ್ಯವಾಗಿ ಎದುರಿಸುತ್ತೇನೆ. ಯಾವುದಕ್ಕೂ  ಹೆದರುವ ಮಗನಲ್ಲ, ನಾನು ಮನುಷ್ಯನಾಗಿರುವುದರಿಂದ ಭಾವುಕನಾಗಿ ಕಣ್ಣೀರು ಹಾಕಿದ್ದೇನೆ. ಯಾರೊಬ್ಬರ ಅನುಕಂಪ ಗಿಟ್ಟಿಸುವ ಅನೀವಾರ್ಯತೆ ಇಲ್ಲ,  ಅಶ್ವತ್ ನಾರಾಯಣ್ ಬಹಳ ದೊಡ್ಡವರು, ಅವರ ಸಲಹೆ ಸ್ವೀಕರಿಸುತ್ತೇನೆ ಎಂದರು.

ಗುಜರಾತ್ ಕಾಂಗ್ರೆಸ್ ಶಾಸಕರನ್ನು ಏಕೆ ರಕ್ಷಿಸಬೇಕಿತ್ತು ಎಂದು ಉಪಮುಖ್ಯಮಂತ್ರಿಯೊಬ್ಬರು ಹೇಳಿಕೆ ನೀಡುತ್ತಾರೆ. ಇದು ರಾಜಕೀಯ ಪ್ರೇರಿತ ಪ್ರಕರಣ ಎಂಬುದು ಈ ಹೇಳಿಕೆಯಿಂದಲೇ ಸ್ಪಷ್ಟವಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.