ಏರ್ಷೆಲ್- ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ ಮತ್ತು ಪುತ್ರ ಕಾರ್ತಿಗೆ ಜಾಮೀನು

ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಚಿದಂಬರಂ ಮತ್ತು ಕಾರ್ತಿ
ಚಿದಂಬರಂ ಮತ್ತು ಕಾರ್ತಿ
Updated on

ನವದೆಹಲಿ: ಏರ್ಸೆಲ್ -ಮ್ಯಾಕ್ಸಿಸ್ ಪ್ರಕರಣದಲ್ಲಿ ದೆಹಲಿ ಕೋರ್ಟ್, ಗುರುವಾರ ಕೇಂದ್ರದ ಮಾಜಿ ಸಚಿವ, ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪಿ.ಚಿದಂಬರಂ ಮತ್ತು ಕಾರ್ತಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಪ್ರಕರಣ ದಾಖಲಿಸಿತ್ತು. ವಿಶೇಷ ಜಡ್ಜ್ ಒಪಿ ಸೈನಿ ಚಿದಂಬರಂ ಮತ್ತು ಅವರ ಪುತ್ರನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ತಲಾ ಒಂದು ಲಕ್ಷ ರು. ವಯಕ್ತಿಕ ಬಾಂಡ್,  ನೀಡುವುದರ ಜೊತೆಗೆ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ. 

2006ರಲ್ಲಿ  ಹಣಕಾಸು ಸಚಿವರಾಗಿದ್ದ ಚಿದಂಬರಂ ವಿದೇಶಿ ಹೂಡಿಕೆ ಪ್ರೋತ್ಸಾಹ ಮಂಡಳಿ (ಎಫ್ಐಪಿಬಿ) ಅನುಮೋದನೆ ಮೂಲಕ ಹೇಗೆ ಆರ್ಥಿಕ ಅವ್ಯವಹಾರ ನಡೆಸಲು ಬಳಸಿಕೊಂಡಿದ್ದಾರೆ ಎನ್ನುವ ಕುರಿತಂತೆ ಸಿಬಿಐ ತನಿಖೆ ನಡೆಸುತ್ತಿದೆ.

ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ 3,500 ಕೋಟಿ ರೂ.ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ 305 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com