ಪೆಟ್ರೋಲ್, ಡೀಸೆಲ್ ವಾಹನಗಳ ನಿಷೇಧ?; ಹೀಗ್ ಹೇಳಿದ್ರು ಕೇಂದ್ರ ಸಚಿವ ನಿತಿನ್ ಗಡ್ಕರಿ..!

ಮಾಲಿನ್ಯ ರಹಿತ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿಷೇಧ ಹೇರಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಗತ್ಯ ಕ್ರಮ

ನವದೆಹಲಿ: ಮಾಲಿನ್ಯ ರಹಿತ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿಷೇಧ ಹೇರಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿತಿನ್ ಗಡ್ಕರಿ ಅವರು, ಕೇಂದ್ರ ಸರ್ಕಾರ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುತ್ತಿರುವುದು ನಿಜ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧಿಸುವ ಯಾವುದೇ ರೀತಿಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಆದರೆ ಈ ಕುರಿತ ಚರ್ಚೆಗಳು ಮತ್ತು ಸಲಹೆಗಳು ಕೇಳಿ ಬರುತ್ತಿವೆ. ಆದರೆ ಒಂದು ವಿಚಾರವನ್ನು ಸ್ಪಷ್ಟಪಡಿಸುತ್ತೇನೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

ಇದೇ ವೇಳೆ ಆಟೋಮೊಬೈಲ್ ಕ್ಷೇತ್ರದ ಕುರಿತು ಮಾತನಾಡಿದ ನಿತಿನ್ ಗಡ್ಕರಿ, ದೇಶದಲ್ಲಿ ಆಟೋ ಮೊಬೈಲ್ ಕ್ಷೇತ್ರದ ಬೆಳವಣಿಗೆ ಕುಸಿದಿರಬಹುದು. ಆದರೆ ಬಹುದೊಡ್ಡ ಪ್ರಮಾಣದ ಉದ್ಯೋಗ ಅವಕಾಶಗಳನ್ನು ಕಲ್ಪಿಸಿದೆ. ಮಾಲಿನ್ಯಕ್ಕೆ ಕೇವಲ ವಾಹನಗಳೇ ಕಾರಣವಲ್ಲ. ಮಾಲಿನ್ಯ ನಿಯಂತ್ರಣ ಸರ್ಕಾರದ ಮತ್ತು ದೇಶದ ಕಾಳಜಿಯಾಗಿದೆ. ದೇಶದ ಅಭಿವೃದ್ದಿಯನ್ನು ದೃಷ್ಠಿಯಲ್ಲಿಟ್ಟುಕೊಂಡು, ಆರ್ಥಿಕತೆಗೆ ಧಕ್ಕೆ ಬಾರದ ರೀತಿಯಲ್ಲಿ ಅದನ್ನು ಹೇಗೆ ಸಾಧಿಸಬಹುದು ಎಂಬುದರ ಕುರಿತು ಗಂಭೀರ ಚರ್ಚೆಯಾಗುತ್ತಿದೆ. ಈ ಕುರಿತಂತೆ ಸರ್ಕಾರ ಕೂಡ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com