ಮೆಹಬೂಬ ಮುಫ್ತಿ(ಸಂಗ್ರಹ ಚಿತ್ರ)
ದೇಶ
ಮೆಹಬೂಬ ಮುಫ್ತಿ ಭೇಟಿಗೆ ಪುತ್ರಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರ ಮಗಳಿಗೆ ತನ್ನ ತಾಯಿಯನ್ನು ಭೇಟಿ ಮಾಡಲು ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿದೆ.
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರ ಮಗಳಿಗೆ ತನ್ನ ತಾಯಿಯನ್ನು ಭೇಟಿ ಮಾಡಲು ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿದೆ. ಈ ಸಂಬಂಧ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಮೆಹಬೂಬ ಮುಫ್ತಿ ಮಗಳು ಸನಾ ಇಲ್ಟಿಜಾ ಜಾವೇದ್ ತನ್ನ ಅರ್ಜಿಯಲ್ಲಿ, ತಾಯಿಯನ್ನು ಒಂದು ತಿಂಗಳಿನಿಂದ ಭೇಟಿ ಮಾಡಿಲ್ಲ, ಅವರ ಆರೋಗ್ಯದ ಬಗ್ಗೆ ನನಗೆ ಗಾಬರಿಯಾಗುತ್ತಿದೆ ಎಂದು ಹೇಳಿದ್ದರು.
ಕೇಂದ್ರ ಸರ್ಕಾರ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 4ರಂದು ಮೆಹಬೂಬ ಮುಫ್ತಿ ಸೇರಿದಂತೆ ಹಲವು ರಾಜಕಾರಣಿಗಳನ್ನು ಬಂಧಿಸಿ ಗೃಹ ಬಂಧನದಲ್ಲಿರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ