ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹಗರಣ: ಕಮಲ್‌ನಾಥ್‌ ಅಳಿಯ ರತುಲ್ ಪುರಿ 6 ದಿನ ಇಡಿ ವಶಕ್ಕೆ

ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಆದೇಶಿಸಿದ್ದಾರೆ. 
ರತುಲ್ ಪುರಿ
ರತುಲ್ ಪುರಿ
Updated on

ನವದೆಹಲಿ: ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಆದೇಶಿಸಿದ್ದಾರೆ. 

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ರತುಲ್ ಪುರಿ ವಿರುದ್ಧ ಕೇಸ್ ದಾಖಲಾಗಿದ್ದು, ಇಟಲಿ ಮೂಲದ ಫಿನ್‌ಮೆಕಾನಿಕಾದ ಬ್ರಿಟಿಷ್ ಅಂಗಸಂಸ್ಥೆಯಾದ ಅಗಸ್ಟಾ ವೆಸ್ಟ್‌ ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಫ್ಟರ್‌ ಖರೀದಿಸಿದ ಅಕ್ರಮಗಳ ಹಿನ್ನೆಲೆಯಲ್ಲಿ ಇಡಿ ಪ್ರಕರಣ ದಾಖಲಿಸಿದೆ.

ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಸಂಪೂರ್ಣ ಹಣದ ಜಾಲ ಮತ್ತು ಅಪರಾಧವನ್ನು ಪತ್ತೆಹಚ್ಚಲು ಪುರಿ ಮತ್ತು ಇತರ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಇಡಿ ಕೋರಿತ್ತು. 

ಇಡಿ ಪರವಾಗಿ ವಾದಗಳನ್ನು ಕೇಳಿದ ನಂತರ, ನ್ಯಾಯಾಧೀಶರು, ವಾಸ್ತವ ಮತ್ತು ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು, ರತುಲ್ ಪುರಿಯನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡುವುದು ಸೂಕ್ತವೆಂದು ನಾನು ಭಾವಿಸುತ್ತೇನೆ ಎಂದರು.

ಪುರಿಯನ್ನು ವೈದ್ಯಕೀಯವಾಗಿ ಪರೀಕ್ಷಿಸಲು ಮತ್ತು ಅವರ ವೈದ್ಯರ ಸಮಾಲೋಚನೆಯ ನಂತರ ಅವರ ಔಷಧಿಗಳನ್ನು ತೆಗೆದುಕೊಳ್ಳಲು ಅನುಮತಿ ನೀಡುವಂತೆ ತನಿಖಾ ಸಂಸ್ಥೆಗೆ ನಿರ್ದೇಶಿಸಲಾಯಿತು. ತನಿಖೆ ವೇಳೆ ಪುರಿಗೆ ಅವರ ವಕೀಲರಿಂದ ಸಹಾಯವನ್ನು ಸಹ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com