ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಏಕನಾಥ  ಗಾಯಕ್ ವಾಡ್ ನೇಮಕ

ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಮಿಲಿಂದಾ ದೇವೂರಾ ರಾಜೀನಾಮೆಯಿಂದ ತೆರವಾಗಿದ್ದ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಏಕನಾಥ ಗಾಯಕ್ ವಾಡ್ ಅವರನ್ನು ನೇಮಕ ಮಾಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಮಿಲಿಂದಾ ದೇವೂರಾ ರಾಜೀನಾಮೆಯಿಂದ ತೆರವಾಗಿದ್ದ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಏಕನಾಥ ಗಾಯಕ್ ವಾಡ್ ಅವರನ್ನು ನೇಮಕ ಮಾಡಲಾಗಿದೆ. 

ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಏಕನಾಥ ಗಾಯಕ್ ವಾಡ್ ಅವರನ್ನು  ನೂತನ ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಅನುಮೋದನೆ ನೀಡಿದ್ದಾರೆ ಎಂದು ಪಕ್ಷದ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ನಿರ್ಗಮಿತ ಅಧ್ಯಕ್ಷ ಮಿಲಿಂದಾ ದೇವೂರ ಅವರ ಕೊಡುಗೆಗೆ ಪಕ್ಷ ಮೆಚ್ಚುಗೆ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿನ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ ಮಿಲಿಂದಾ ದೇವೂರಾ ಕೂಡಾ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಿಲಿಂದಾ ದೇವರೂ ರಾಹುಲ್ ಗಾಂಧಿ ಅವರ ಆಪ್ತರಾಗಿದ್ದು, ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಪಾತ್ರ ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com