ಜಾಮೀನು ಕೋರಿ ದೆಹಲಿ 'ಹೈ' ಮೆಟ್ಟಿಲೇರಿದ ಚಿದಂಬರಂ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಜಾಮೀನು ಕೋರಿ ಬುಧವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 
ಚಿದಂಬರಂ
ಚಿದಂಬರಂ
Updated on: 

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರು ಜಾಮೀನು ಕೋರಿ ಬುಧವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ಸೆಪ್ಟೆಂಬರ್ 5 ರಂದು ಆದೇಶ ನೀಡಿದ್ದ ದೆಹಲಿ ವಿಶೇಷ ನ್ಯಾಯಾಲಯ 14 ದಿನಗಳ ಚಿದಂಬರಂ ಅವರಿಗೆ  ನ್ಯಾಯಾಂಗ ಬಂಧನ ವಿಧಿಸಿತ್ತು. ಪ್ರಕರಣ ಅತ್ಯಂತ ಗಂಭೀರವಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿತ್ತು. 

ಚಿದಂಬರಂ ಅವರು ಬಂಧನಕ್ಕೊಳಗಾಗುತ್ತಿದ್ದಂತೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ. ಈ ನಡುವೆ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಚಿದಂಬರಂ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com