ಜೀವ ರಕ್ಷಣೆಗಾಗಿ ದುಬಾರಿ ದಂಡ, ರಾಜ್ಯಗಳು ದಂಡದ ಮೊತ್ತ ಕಡಿಮೆ ಮಾಡಬಹುದು: ಗಡ್ಕರಿ

ಅಪಘಾತ ತಡೆಯಲು ಮತ್ತು ಜನರ ಜೀವವನ್ನು ರಕ್ಷಿಸುವುದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಇದರ ಉದ್ದೇಶ ಹಣ ಸಂಗ್ರಹಿಸುವುದಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ...
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Updated on

ನವದೆಹಲಿ: ಅಪಘಾತ ತಡೆಯಲು ಮತ್ತು ಜನರ ಜೀವವನ್ನು ರಕ್ಷಿಸುವುದಕ್ಕಾಗಿ ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಇದರ ಉದ್ದೇಶ ಹಣ ಸಂಗ್ರಹಿಸುವುದಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

ದೇಶದಲ್ಲಿ ಅತಿ ಹೆಚ್ಚು ಜನ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ದೇಶಾದ್ಯಂತ 1.20 ಲಕ್ಷ ಜನರು ಅಪಘಾತಗಳಲ್ಲಿ ಜೀವಬಿಡುತ್ತಿದ್ದಾರೆ. ಜನರ ಜೀವ ರಕ್ಷಣೆ ಹಾಗೂ ರಸ್ತೆ ಅಪಘಾತ ನಿಯಂತ್ರಣವೇ ನಮ್ಮ ಮುಖ್ಯ ಉದ್ದೇಶ. ಕಾನೂನು ಉಲ್ಲಂಘಿಸದ ಜನರು ಭಯಪಡಬಾರದು. ತಪ್ಪು ಮಾಡದಿದ್ದರೆ ಅವರು ಯಾವುದೇ ದಂಡ ತೆರಬೇಕಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.

ಇನ್ನು ಸೆಪ್ಟೆಂಬರ್​ 1ರಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ಕಾಯ್ದೆ(ತಿದ್ದುಪಡಿ) ಅಳವಡಿಕೆ ಆಯಾ ರಾಜ್ಯಗಳಿಗೆ ಬಿಟ್ಟಿದ್ದು, ರಾಜ್ಯ ಸರ್ಕಾರಗಳು ದಂಡದ ಮೊತ್ತವನ್ನು ಪರಿಷ್ಕರಿಸಬಹುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಹೊಸ ಕಾಯ್ದೆಯ ಪ್ರಕಾರ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ದುಬಾರಿ ದಂಡವನ್ನು ಪೊಲೀಸರು ವಿಧಿಸುತ್ತಿದ್ದಾರೆ. ಇದಕ್ಕೆ ಎಲ್ಲ ರಾಜ್ಯಗಳಲ್ಲೂ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ಈಗಾಗಲೇ ಗುಜರಾತ್​ ರಾಜ್ಯ ಸರ್ಕಾರ, ದಂಡದ ಪ್ರಮಾಣವನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಕರ್ನಾಟಕ ಸರ್ಕಾರ ಕೂಡ ದಂಡದ ಪ್ರಮಾಣ ಇಳಿಕೆ ಮಾಡುವುದಾಗಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com