ಚೆನ್ನೈ: ತಲೆ ಮೇಲೆ ಎಐಎಡಿಎಂಕೆ ಬ್ಯಾನರ್ ಬಿದ್ದು ಯುವತಿ ಸಾವು
ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಯುವತಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎಐಎಡಿಎಂಕೆ ಕಾರ್ಯಕರ್ತನ ಮಗನ ಮದುವೆಗಾಗಿ ಅಳವಡಸಿದ್ದ ಬ್ಯಾನರ್ ಬಿದ್ದಿದೆ,

ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಯುವತಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎಐಎಡಿಎಂಕೆ ಕಾರ್ಯಕರ್ತನ ಮಗನ ಮದುವೆಗಾಗಿ ಅಳವಡಸಿದ್ದ ಬ್ಯಾನರ್ ಬಿದ್ದಿದೆ.
ಶುಭಶ್ರೀ (23) ಮೃತಪಟ್ಟ ಯುವತಿ. ಶುಭಶ್ರೀ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎಐಎಡಿಎಂಕೆ ಕಾರ್ಯಕರ್ತನ ಮಗನ ಮದುವೆಗಾಗಿ ಅಳವಡಸಿದ್ದ ಬ್ಯಾನರ್ ಬಿದ್ದಿದೆ, ಪರಿಣಾಮ ಶುಭಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂಬದಿಯಿಂದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋಗಿದೆ.
ಈ ಅಪಘಾತದಲ್ಲಿ ಶುಭಾಶ್ರೀ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಹೋಗುವಷ್ಟರಲ್ಲಿ ಶುಭಶ್ರೀ ಮೃತಪಟ್ಟಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ.
ಶುಭಶ್ರೀ ಬಿಟೆಕ್ ಪದವೀಧರೆಯಾಗಿದ್ದು, ತನ್ನ ಪರೀಕ್ಷೆ ಮುಗಿಸಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


