ಪಿಒಕೆಗಾಗಿ ಕೇಂದ್ರ ಸರ್ಕಾರ ವಿಶೇಷ ಕಾರ್ಯತಂತ್ರ ರೂಪಿಸುತ್ತಿದೆ: ವಿ.ಕೆ.ಸಿಂಗ್

ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 
ವಿ.ಕೆ.ಸಿಂಗ್
ವಿ.ಕೆ.ಸಿಂಗ್
Updated on

ಗ್ವಾಲಿಯರ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ನಿವೃತ್ತ ಸೇನಾ ಮುಖ್ಯಸ್ಥ ವಿ.ಕೆ.ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. 

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ಸನ್ನದ್ಧವಾಗಿ ನಿಂತಿದೆ. ಆದರೆ, ಕೇಂದ್ರದ ಆದೇಶಕ್ಕಾಗಿ ಕಾಯುತ್ತಿದೆ. ಪಿಒಕೆಗಾಗಿ ವಿಶೇಷ ಕಾರ್ಯತಂತ್ರಗಳನ್ನು ರೂಪಿಸಲಾಗಿದ್ದು, ಅದನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಈ ಹಿಂದೆ ಹೇಳಿಕೆ ನೀಡಿದ್ದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ತಮ್ಮ ಹೇಳಿಕೆ ಮೂಲಕ ಪಾಕಿಸ್ತಾನಕ್ಕೆ ಬಲವಾದ ಸಂದೇಶ ರವಾನಿಸಿದ್ದರು. 

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಕುರಿತು ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದ್ದು, ಕೇಂದ್ರದ ಆದೇಶದಂತೆ ದೇಶದ ಸಂಸ್ಥೆಗಳು ಕಾರ್ಯನಿರ್ವಹಿಸಲಿವೆ. ಆದರೆ, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧವಾಗಿದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com