ದೆಹಲಿ ಸಿಎಂ ಕೇಜ್ರಿವಾಲ್ ಗೆ ಮುಖಭಂಗ; ಸಮ-ಬೆಸ ಸಂಖ್ಯೆ ಯೋಜನೆ ಅಗತ್ಯವಿಲ್ಲ ಎಂದ ಗಡ್ಕರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಯೋಜನೆ ಜಾರಿ ಬೇಕಿಲ್ಲ ಎಂದು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವೆಂಬರ್ 4ರಿಂದ 15ರವರೆಗೂ ಯೋಜನೆ ಜಾರಿ ಮಾಡುವುದಾಗಿ ಹೇಳಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಮಾಡುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಯೋಜನೆ ಜಾರಿ ಬೇಕಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು 7 ಅಂಶಗಳ ಕ್ರಿಯಾ ಯೋಜನೆ ಜಾರಿಗೆ ತರಲಾಗುತ್ತಿದೆ. ಈ ವ್ಯವಸ್ಥೆ ನವೆಂಬರ್ 4ರಿಂದ 15ವರೆಗೂ ಚಾಲ್ತಿಯಲ್ಲಿರಲಿದೆ ಎಂದು ಕೇಜ್ರಿವಾಲ್ ಹೇಳಿದ್ದರು. ಅಲ್ಲದೆ ಚಳಿಗಾಲದಲ್ಲಿ ಜನತೆಯನ್ನು ಕಾಡುವ ವಾಯುಮಾಲಿನ್ಯ ಅಪಾಯದ ಮಟ್ಟ ತಲುಪುತ್ತದೆ. ಈ ಹಿನ್ನಲೆಯಲ್ಲಿ ನವೆಂಬರ್ ಆರಂಭದಿಂದಲೇ ಸಮ-ಬೆಸ ಸಂಖ್ಯೆಯ ವಾಹನ ಸಂಚಾರವನ್ನು ಪುನಾರಾರಂಭಿಸಲಾಗುವುದು. ವಾಯುಮಾಲಿನ್ಯವನ್ನು ಪ್ರತೀನಿತ್ಯ ಪರಿಶೀಲನೆ ನಡೆಸುತ್ತಿರುವ ಏಕೈಕ ರಾಜ್ಯವೆಂದರೆ ಅದು ದೆಹಲಿ ಮಾತ್ರ. ಸಮ-ಬೆಸ ನಿಯಮವನ್ನು ಇದು ಮೂರನೇ ಬಾರಿಗೆ ಜಾರಿಗೆ ತರಲಾಗುತ್ತಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. 

ಆದರ ಅವರ ಈ ಹೇಳಿಕೆ ತದ್ವಿರುದ್ಧ ಎಂಬಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿಕೆ ನೀಡಿದ್ದು, ಈ ಯೋಜನೆ ಜಾರಿ ಬೇಕಿಲ್ಲ ಎಂದು ಹೇಳಿದ್ದಾರೆ. ನಾಗಪುರದಲ್ಲಿ ಮಾತನಾಡಿದ ಅವರು, ಈಗ ದೆಹಲಿಯಲ್ಲಿ ಸಮ-ಬೆಸ ಯೋಜನೆಯನ್ನು ಜಾರಿಗೆ ತರುವ ಅವಶ್ಯಕತೆ ಇಲ್ಲ. ಏಕೆಂದರೆ ನಾವು ನಿರ್ಮಾಣ ಮಾಡಿರುವ ಹೊಸ ರಿಂಗ್ ರೋಡ್ ನಿಂದಾಗಿ ಮಾಲಿನ್ಯ ನಿಯಂತ್ರಣ ಸಾಧ್ಯವಾಗುತ್ತದೆ. ಇನ್ನು ಮೂರು ವರ್ಷದಲ್ಲಿ ದೆಹಲಿ ಮಾಲಿನ್ಯ ಮುಕ್ತವಾಗಲಿದೆ ಎಂದು ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ನಾಗಪುರದಲ್ಲಿ ಶೀಘ್ರದಲ್ಲೇ ವಿದ್ಯುತ್ ಚಾಲಿತ್ ಬಸ್ ಸಂಚಾರ ಆರಂಭವಾಗಲಿದೆ ಎಂದು ಗಡ್ಕರಿ ಘೋಷಣೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com