ಚಿತ್ತೂರು: ಕಾರು ಪಲ್ಟಿ, ಬೆಂಗಳೂರಿನ ಐವರು ಸಜೀವ ದಹನ

ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಐವರು ಸಜೀವ ದಹನವಾದ ದಾರುಣ ಘಟನೆ ಶನಿವಾರ ಚಿತ್ತೂರಿನ ಪಲಮನೇರು ಮಂಡಲಂ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಅಮರಾವತಿ:  ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಐವರು ಸಜೀವ ದಹನವಾದ ದಾರುಣ ಘಟನೆ ಶನಿವಾರ ಚಿತ್ತೂರಿನ ಪಲಮನೇರು ಮಂಡಲಂ ಬಳಿ ನಡೆದಿದೆ.

ಮೂವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ, ಮತ್ತೋರ್ವ ತೀವ್ರ ಗಾಯಗಳಿಂದ ಬಳಲುತ್ತಿದ್ದಾರೆ

ಡ್ರೈವರ್ ವಿಷ್ಣು  ಕಾರಿನೆ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದಿದೆ, ಕಾರು ಪಲ್ಟಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಒಳಗಿದ್ದವರು ಸುಟ್ಟು ಕರಕಲಾಗಿದ್ದಾರೆ.

ಸುಟ್ಟ ಗಾಯಗಳಿಂದ ಬಳಲುತ್ತಿರುವ ಡ್ರೈವರ್ ನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಲಾಗಿದೆ, ವಿಷ್ಣು ಪತ್ನಿ, ಇಬ್ಬರು ಮಕ್ಕಳು , ಆಕೆಯ ತಂಗಿ ಮತ್ತು ಅವರ ಮಗು ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com