ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ವಿರುದ್ಧ ಶೀಘ್ರ ರೇಪ್ ಕೇಸ್ ದಾಖಲು

ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ಅವರಿಗೆ ಈಗ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಶೀಘ್ರದಲ್ಲೇ ಅತ್ಯಾಚಾರ ಪ್ರಕರಣ ದಾಖಲು ಮಾಡುವ ಸಾಧ್ಯತೆ ಇದೆ.
ಚಿನ್ಮಯಾನಂದ್
ಚಿನ್ಮಯಾನಂದ್

ಶಹಜಾನ್ಪುರ್: ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ್ ಅವರಿಗೆ ಈಗ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಶೀಘ್ರದಲ್ಲೇ ಅತ್ಯಾಚಾರ ಪ್ರಕರಣ ದಾಖಲು ಮಾಡುವ ಸಾಧ್ಯತೆ ಇದೆ.

ಚಿನ್ಮಯಾನಂದ್ ಅವರ ವಿರುದ್ಧ 23 ವರ್ಷದ ಕಾನೂನು ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಇಂದು ಯುವತಿಯನ್ನು ಶಹಜಾನ್ಪುರ್ ಕೋರ್ಟ್ ಗೆ ಕರೆತಂದು ಹೇಳಿಕೆ ದಾಖಲಿಸಿದೆ. 

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಉತ್ತರ ಪ್ರದೇಶ ಸರ್ಕಾರ ಮಾಜಿ ಕೇಂದ್ರ ಸಚಿವರ ವಿರುದ್ಧದ ಅತ್ಯಾಚಾರ ಆರೋಪದ ಕುರಿತು ತನಿಖೆ ಸೆಪ್ಟೆಂಬರ್ 3ರಂದು ಎಸ್ಐಟಿ ರಚಿಸಿತ್ತು. 

ಇತ್ತೀಚಿಗಷ್ಟೇ ವಿಧಿ ವಿಜ್ಞಾನ ತಜ್ಞರನ್ನೊಳಗೊಂಡ ಎಸ್ಐಟಿ ತಂಡ ಶಹಜಾನ್ಪುರ್ ದ ಮಹಿಳಾ ಹಾಸ್ಟೇಲ್ ನ ಕಾನೂನು ವಿದ್ಯಾರ್ಥಿನಿಯ ರೂಮ್ ಅನ್ನು ಐದು ಗಂಟೆಗಳ ಕಾಲ ತಪಾಸಣೆ ನಡೆಸಿತ್ತು. ಎಸ್ಐಟಿ ಹಾಸ್ಟೇಲ್ ನ ಕೊಠಡಿಯಲ್ಲಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದು ಮೂಲಗಳು ತಿಳಿಸಿವೆ.

ಚಿನ್ಮಯಾನಂದ್ ಅವರು ಒಂದು ವರ್ಷಗಳ ಕಾಲ ನನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಮತ್ತು ದೈಹಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ದೆಹಲಿ ಪೊಲೀಸರಿಗೆ 12 ಪುಟಗಳ ದೂರು ನೀಡಿದ್ದರು. ದೆಹಲಿ ಪೊಲೀಸರು ಆ ದೂರನ್ನು ಎಸ್ಐಟಿಗೆ ವರ್ಗಾಯಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com