ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್

ಡಿಕೆಶಿ ಅಕ್ರಮ ಹಣ ಪ್ರಕರಣ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಾರಿ....

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮೌಖಿಕ ಸಮನ್ಸ್ ನೀಡಿದೆ.

ಅಕ್ರಮ ಹಣಕಾಸು ವ್ಯವಹಾರದ ಸಂಬಂಧ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಇತ್ತ ಮಾಜಿ ಸಚಿವರ ಪುತ್ರಿ ಐಶ್ವರ್ಯಾ ಕೂಡ ವಿಚಾರಣೆಗೆ ಹಾಜರಾಗಿದ್ದಾರೆ. ಇದರ ಬೆನ್ನಲ್ಲೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನನಗೆ ಇಡಿ ಸಮನ್ಸ್ ನೀಡಿರುವುದು ನಿಜ. ಸಾಕ್ಷಿಯಾಗಿ ಹೇಳಿಕೆ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೆ ನನಗೆ ಬರುವುದಕ್ಕೆ ಆಗುವುದಿಲ್ಲ, ಸೆಪ್ಟೆಂಬರ್ 18ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮನವಿ ಮಾಡಿಕೊಂಡಿದ್ದೆ. ಖಂಡಿತವಾಗಿ ವಿಚಾರಣೆಗೆ ಹಾಜರಾಗುತ್ತೇನೆ ಎಂದಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com