
ನವದೆಹಲಿ: ಉತ್ತರ ಪ್ರದೇಶ ಹಾಗೂ ಬಿಹಾರದಿಂದ ರಾಜ್ಯಸಭೆಗೆ ಖಾಲಿ ಇರುವ ಎರಡು ಸ್ಥಾನಕ್ಕೆ ಅಕ್ಟೋಬರ್ 16ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ.
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್ ಜೆಠ್ಮಲಾನಿ ಅವರ ನಿಧನದಿಂದ ತೆರವಾಗಿದ್ದ ಎರಡು ಸ್ಥಾನಗಳಿಗೆ ಅಕ್ಟೋಬರ್ 16ರಂದು ಚುನಾವಣೆ ನಡೆಯಲಿದ್ದು, ಅಂದೇ ಮತ ಏಣಿಕೆ ಸಹ ನಡೆಯಲಿದೆ.
ರಾಜ್ಯಸಭೆಯ ಉಪ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನವಾಗಿದೆ.
ಮರುದಿನ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
Advertisement