

ಮುಂಬಯಿ: ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಕಾಂಗ್ರೆಸ್ ಮತ್ತು ಎನ್ ಸಿಪಿ ಗಳು ಸೀಟು ಹಂಚಿಕೆ ಪ್ರಕ್ರಿಯೆಗೆ ಫುಲ್ ಸ್ಟಾಪ್ ಇಟ್ಟಿದೆ.
ಅಕ್ಟೋಬರ್ 21 ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 125 ಹಾಗೂ ಎನ್ ಸಿಪಿ 125 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ, ಇನ್ನೂ ಉಳಿದ 38 ಕ್ಷೇತ್ರಗಳಲ್ಲಿ ಮೈತ್ರಿಕೂಟದ ವಿರೋಧ ಪಕ್ಷಗಳು ಕಣಕ್ಕಿಳಿಯಲಿವೆ,
ಮಹಾರಾಷ್ಟ್ರದಲ್ಲಿ 288 ವಿಧಾನಸಭೆ ಕ್ಷೇತ್ರಗಳಿದ್ದು, ನಮ್ಮ ಮೈತ್ರಿ ಮುಂದುವರಿಯಲಿದೆ, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ತಿಳಿಸಿದ್ದಾರೆ.
ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಎನ್ ಸಿ ಪಿಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ, ಸೆಪ್ಟಂಬರ್ 13 ರಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದರು. 60 ಅಭ್ಯರ್ಥಿಗಳನ್ನು ಪೈನಲ್ ಮಾಡಿದ್ದಾರೆ, ಇಂದು ಮತ್ತೆ ಸಭೆ ನಡೆಯಲಿದ್ದು, ಉಳಿದ 65 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ, ಹಾಲಿ ಕಾಂಗ್ರೆಸ್ ಶಾಸಕರು 2019 ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದುಕೊಂಡಿದ್ದಾರೆ.