ಪುಣೆ: ಭಾರೀ ಮಳೆಗೆ ಗೋಡೆ ಕುಸಿದು ಐವರ ದುರ್ಮರಣ

ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪುಣೆಯಲ್ಲಿ ಭಾರೀ ಮಳೆ
ಪುಣೆಯಲ್ಲಿ ಭಾರೀ ಮಳೆ

ಪುಣೆ: ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶಕರ್ ನಗರ್ ಬಳಿ ಗೋಡೆಯೊಂದು ಕುಸಿದು ಬಿದ್ದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಮೇಲೆತ್ತಲಾಗಿದೆ.

ಮತ್ತೊಂದೆಡೆ ಮುಂಬೈ ಖಾರ್ ಪ್ರದೇಶದಲ್ಲಿ ಮಂಗಳವಾರ ಕಟ್ಟಡದಡಿ ಸಿಲುಕಿದ್ದ 10 ವರ್ಷದ ಬಾಲಕಿ ಇಂದು ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಪುಣೆ ಗ್ರಾಮವೊಂದರಲ್ಲಿ ಕೇವಲ ಮೂರು ಗಂಟೆ ಅವಧಿಯಲ್ಲಿ 112 ಮಿ ಮೀ ಮಳೆಯಾಗಿ ದಾಖಲೆ ಸೃಷ್ಟಿಯಾಗಿದೆ. ಇದರ ಜೊತೆಗೆ ಮುಂಬೈ – ಪುಣೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com