ಕ್ಯಾಮೆರಾ ಮುಂದೆ ಹೀರೋ ಆಗಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ, ಭೀಕರ ವಿಡಿಯೋ!

ರಾತ್ರೋ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಹೀರೋ ಆಗುವ ಉದ್ದೇಶದಿಂದ ವಿಷಜಂತು ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದೆ.
ಹಾವು ಕಚ್ಚಿರುವ ದೃಶ್ಯ
ಹಾವು ಕಚ್ಚಿರುವ ದೃಶ್ಯ
Updated on

ನವದೆಹಲಿ: ರಾತ್ರೋ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಹೀರೋ ಆಗುವ ಉದ್ದೇಶದಿಂದ ವಿಷಜಂತು ಹಾವಿನ ಜೊತೆ ಚೆಲ್ಲಾಟವಾಡಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದೆ. 

ವಿಷಪೂರಿತ ಹಾವುಗಳನ್ನು ಹಿಡಿದು ಅವುಗಳನ್ನು ಆಟವಾಡಿಸುವ ವಿಡಿಯೋ ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿ ಹೀರೋ ಆಗುವ ಖಯಾಲಿ ಯುವಕರಲ್ಲಿ ಹೆಚ್ಚಾಗುತ್ತಿದೆ. ಅದೇ ರೀತಿ ಮಾಡಲು ಹೋಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಯುವಕನೋರ್ವ ಹಾವೊಂದನ್ನು ಹಿಡಿದು ಅದು ಕಚ್ಚುವಾಗ ತಪ್ಪಿಸಿಕೊಳ್ಳುತ್ತಾನೆ. ಹೀಗೆ ಎರಡು ಮೂರು ಬಾರಿ ತಪ್ಪಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗುತ್ತಾನೆ. ಆದರೆ ವಿಧಿ ಲಿಖಿತ ಬೇರೇಯೆ ಇತ್ತು. ನಾಲ್ಕನೇ ಬಾರಿಗೆ ಹಾವು ಆತನ ತಲೆಗೆ ಬಲವಾಗಿ ಕಚ್ಚಿ ಹಿಡಿಯುತ್ತದೆ. ಕ್ಷಣ ಮಾತ್ರದಲ್ಲೇ ಆತ ಕುಸಿದು ಬಿದ್ದಿರುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com