ಪ್ರಧಾನಿ ಮೋದಿ ಭಾರತದ ನೆಚ್ಚಿನ ವ್ಯಕ್ತಿ, ಎರಡನೇ ಸ್ಥಾನದಲ್ಲಿ ಧೋನಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಜನರಿಂದ ಅತೀ ಹೆಚ್ಚು ಮೆಚ್ಚುಗೆ ಗಳಿಸಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. 
ಮಹೇಂದ್ರ ಸಿಂಗ್ ಧೋನಿ ಹಾಗೂ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಮಹೇಂದ್ರ ಸಿಂಗ್ ಧೋನಿ ಹಾಗೂ ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಜನರಿಂದ ಅತೀ ಹೆಚ್ಚು ಮೆಚ್ಚುಗೆ ಗಳಿಸಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. 

ಯುಗೌ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, 2019ರಲ್ಲಿ ಪ್ರಧಾನಿ ಮೋದಿ ಅತ್ಯಂತ ಮೆಚ್ಚುಗೆ ಪಡೆದ ವ್ಯಕ್ತಿ ಎನಿಸಿದರೆ, ಬಾಕ್ಸರ್ ಮೇರಿ ಕೋಮ್ ಅವರು ಅತ್ಯಂತ ಮೆಚ್ಚುಗೆ ಪಡೆದ ಮಹಿಳೆ ಎನಿಸಿಕೊಂಡಿದ್ದಾರೆ. 

ಶೇ.15.66ರಷ್ಟು ಮಂದಿ ಮೋದಿಯವರೇ ತಮಗೆ ಅಚ್ಚುಮೆಚ್ಚು ಎಂದು ಹೇಳಿದ್ದಾರೆ. ನಂತರದಲ್ಲಿ ಶೇ.8.58 ರಷ್ಟು ಮಂದಿ ಧೋನಿ ತಮಗೆ ಅಚ್ಚುಮೆಚ್ಚು ಎಂದಿದ್ದಾರೆ. 

ಉದ್ದಮಿ ರತನ್ ಟಾಟಾ ಶೇ.8.02, ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಶೇ.7.36 ಮತ್ತು ಬಿಲ್ ಗೇಟ್ಸ್ ಶೇ.6.96 ಜನರ ಮೆಚ್ಚಿನ ವ್ಯಕ್ತಿಗಳಾಗಿದ್ದಾರೆ. 

ಈ ಪಟ್ಟಿಯಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ 6ನೇ ಹಾಗೂ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 7ನೇ ಸ್ಥಾನ ಪಡೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com