ಭಾರತೀಯ ಸೇನೆ
ದೇಶ
ಉಗ್ರರನ್ನು ಹೊಡೆದುರುಳಿಸಿ ರಸ್ತೆ ಮಧ್ಯೆ ಸಂಭ್ರಮಿಸಿದ ಭಾರತೀಯ ಯೋಧರು, ವಿಡಿಯೋ ವೈರಲ್!
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು ರಸ್ತೆ ಮಧ್ಯೆ ಜೈಕಾರ ಕೂಗಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು ರಸ್ತೆ ಮಧ್ಯೆ ಜೈಕಾರ ಕೂಗಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.
ಜಮ್ಮು ಮತ್ತು ಕಾಶ್ಮೀರದ ಗಂದೇರ್ ಬಾಲ್ ಜಿಲ್ಲೆಯ ನರನಾಗ್ ಬಳಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿತ್ತು.
ಬೆಳಗ್ಗೆ ಭಾರತೀಯ ಸೇನಾ ವಾಹನದ ಮೇಲೆ ಉಗ್ರರು ಗ್ರೈನೇಡ್ ದಾಳಿ ನಡೆಸಿದ್ದರು. ಕೂಡಲೇ ಭಾರತೀಯ ಸೇನೆಯ ಯೋಧರು ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ರಾಂಬನ್ ಪ್ರದೇಶದಲ್ಲಿ ಮೂವರು ಉಗ್ರರು ಮನೆಯೊಂದಕ್ಕೆ ನುಗ್ಗಿದ್ದು ಮನೆಯಲ್ಲಿರುವವರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದರು. ಮನೆಯನ್ನು ಸುತ್ತುವರೆದಿದ್ದ ಭಾರತೀಯ ಯೋಧರು ಉಗ್ರರ ಹೆಡೆಮುರಿ ಕಟ್ಟಿ ಒತ್ತೆಯಾಳುಗಳನ್ನು ರಕ್ಷಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ