ಸಮುದ್ರ ಮಾರ್ಗದಲ್ಲಿ ಉಗ್ರ ದಾಳಿ ಸಾಧ್ಯತೆ ಕುರಿತು ಮಾಹಿತಿ: ರಾಜನಾಥ್ ಸಿಂಗ್

ಭಾರತದ ಸಮುದ್ರ ಗಡಿಯಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಉಗ್ರರಿಗೆ ಪಾಕಿಸ್ತಾನದ ನೆರವು; ಐಎನ್ಎಸ್ ವಿಕ್ರಮಾಧಿತ್ಯದಲ್ಲಿ ಕೇಂದ್ರ ರಕ್ಷಣಾ ಸಚಿವರ ಹೇಳಿಕೆ

ಮುಂಬೈ: ಭಾರತದ ಸಮುದ್ರ ಗಡಿಯಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮುಂಬೈನಲ್ಲಿ ಐಎನ್ಎಸ್ ವಿಕ್ರಮಾಧಿತ್ಯ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಾಜನಾಥ್ ಸಿಂಗ್ ಅವರು, ಗುಪ್ತಚರ ಮೂಲಗಳ ಅನ್ವಯ ಸಮುದ್ರ ಮಾರ್ಗದಲ್ಲಿ ಉಗ್ರ ದಾಳಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಮಗೆ ಲಭಿಸಿರುವ ಮಾಹಿತಿ ಪ್ರಕಾರ ನೆರೆಯ ರಾಷ್ಟ್ರದ ಸೇನೆ, ಗುಪ್ತಚರ ಇಲಾಖೆ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಹೇಳಿದರು.

ಎಲ್ಲರಿಗೂ ತಿಳಿದಂತೆ ಪಾಕಿಸ್ತಾನ ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಇದಕ್ಕಾಗಿ ಉಗ್ರರನ್ನು ಪೋಷಣೆ ಮಾಡಿ ಅವರನ್ನು ಭಾರತದ ವಿರುದ್ಧ ದಾಳಿಗೆ ಬಳಕೆ ಮಾಡಿಕೊಳ್ಳುತ್ತಿದೆ. ಸಮುದ್ರ ಮಾರ್ಗದಲ್ಲಿ ಈ ದಾಳಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಭಾರತೀಯ ನೌಕಾಪಡೆ ಯಾವುದೇ ಪರಿಸ್ಥಿತಿ ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com