ನವದೆಹಲಿ: ಅಕ್ಟೋಬರ್ 21ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಆಡಳಿರೂಢ ಬಿಜೆಪಿ 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಮತ್ತೆ ಕರ್ನಲ್ ನಿಂದ ಕಣಕ್ಕಿಳಿಸಲಾಗಿದೆ.
ಬಿಜೆಪಿ ಈ ಬಾರಿ ಭಾರತದ ಹಾಕಿ ತಂಡದ ಮಾಜಿ ನಾಯಕ ಸಂದೀಪ್ ಸಿಂಗ್, ಓಲಿಂಪಿಕ್ ಪದಕ ವಿಜೇತ ಯೇಗೇಶ್ವರ್ ದತ್, ಇತ್ತೀಚಿಗಷ್ಟೇ ಕೇಸರಿಪಡೆ ಸೇರಿದ ಕುಸ್ತಿಪಟು ಬಬಿತಾ ಫೋಗಟ್ ಸೇರಿದಂತೆ ಹಲವು ಮಾಜಿ ಕ್ರೀಡಾಪಟುಗಳಿಗೆ ಟಿಕೆಟ್ ನೀಡಲಾಗಿದೆ.
ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ದೆಹಲಿಯಲ್ಲಿ ಸಭೆ ಸೇರಿದ್ದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ, 38 ಹಾಲಿ ಶಾಸಕರು ಸೇರಿದಂತೆ 78 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ ಮತ್ತು ಏಳು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸಿಂಗ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ.
Advertisement