ಹಾರ್ದಿಕ್ ಪಟೇಲ್ ಚುನಾವಣೆ ಕನಸು ಭಗ್ನ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

2015ರ ಹಿಂಸಾಚಾರ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದೆ. ...
ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್
ನವದೆಹಲಿ: 2015ರ ಹಿಂಸಾಚಾರ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ತಿರಸ್ಕರಿಸಿದೆ. 
ಕಾಂಗ್ರೆಸ್ ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಾರ್ದಿಕ್ ಪಟೇಲ್ ಸಕಲ ಸಿದ್ಧತೆ ನಡೆಸಿದ್ದಾರೆ,.ಆದರೆ ನಾಲ್ಕು ವರ್ಷಗಳ ಹಿಂದೆ ನಡೆದ ಪ್ರಕರಣದಲ್ಲಿ ಹಾರ್ದಿಕ್ ಪಟೇಲ್ ದೋಷಿಯಾಗಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದರು.
ವಿಸನಗರ್ ಸೆಷೆನ್ಸ್ ನ್ಯಾಯಾಲಯ ಪ್ರಕರಣದಲ್ಲಿ ಹಾರ್ದಿಕ್ ಪಟೇಲ್ ಗೆ 2 ವರ್ಷ ಶಿಕ್ಷೆ ವಿಧಿಸಿತ್ತು, ಈ ತೀರ್ಪಿಗೆ ತಡೆ ನೀಡುವಂತೆ ಕೋರಿ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಕೆಲ ದಿನಗಳ ಹಿಂದಷ್ಟೇ ತಿರಸ್ಕರಿಸಿತ್ತು, ಅದನ್ನು ಪ್ರಶ್ನಿಸಿ  ಪಟೇಲ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು, ತುರ್ತಾಗಿ ಪ್ರಕರಣದ ವಿಚಾರಣೆ ನಡೆಸುವಂತೆ ಕೋರಿದ್ದರು,
ಆದರೆ ಸುಪ್ರೀಂ ಕೋರ್ಟ್ ತುರ್ತಾಗಿ ವಿಚಾರಣೆ ನಡೆಸಲು ನಿರಾಕರಿಸಿದೆ, ಪ್ರಕರಣದಲ್ಲಿ ಖುಲಾಸೆಗೊಂಡರೇ ಮಾತ್ರ  ಲೋಕಸಭೆ ಚುನಾವಣೆಯಲ್ಲಿ ಹಾರ್ದಿಕ್ ಪಟೇಲ್ ಸ್ಪರ್ದಿಸಲು ಸಾಧ್ಯ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com