ಮೋದಿ ಸೇನೆ ಹೇಳಿಕೆ: ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್ ಗೆ ಇಸಿ ನೋಟಿಸ್

ಭಾರತೀಯ ಸೇನೆಯನ್ನು ಮೋದಿ ಸೇನೆ ಎಂದು ಕರೆದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ...

Published: 03rd April 2019 12:00 PM  |   Last Updated: 03rd April 2019 11:56 AM   |  A+A-


EC issues notice to UP CM Yogi Adityanath over his 'Modi ki sena' remarks

ಯೋಗಿ ಆದಿತ್ಯನಾಥ್

Posted By : LSB LSB
Source : ANI
ನವದೆಹಲಿ: ಭಾರತೀಯ ಸೇನೆಯನ್ನು ಮೋದಿ ಸೇನೆ ಎಂದು ಕರೆದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.

ನಿಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಏಪ್ರಿಲ್ 5ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರ ಪ್ರದೇಶ ಸಿಎಂಗೆ ಚುನಾವಣಾ ಆಯೋಗ ಸೂಚಿಸಿದೆ.

ಏಪ್ರಿಲ್ 1ರಂದು ಗಾಜಿಯಾಬಾದ್ ನಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಯೋಗಿ, ಕಾಂಗ್ರೆಸ್ ನವರು ಉಗ್ರರಿಗೆ ಬಿರಿಯಾನಿ ನೀಡಿ ಸತ್ಕರಿಸಿದರೆ, ಮೋದಿ ಸೇನೆ ಉಗ್ರರಿಗೆ ಗುಂಡು ಹೊಡೆದು ತಿರುಗೇಟು ನೀಡಿದೆ ಎಂದಿದ್ದರು.

ಯೋಗಿ ಆದಿತ್ಯನಾಥ್ ಅವರ ಈ ಹೇಳಿಕೆಯನ್ನು ಪ್ರತಿಪಕ್ಷಗಳಾದ ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಟಿಎಂಸಿ ಖಂಡಿಸಿದ್ದವು.
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp