ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್; 3 ನಕ್ಸಲರು ಹತ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ!

ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.

Published: 15th April 2019 12:00 PM  |   Last Updated: 15th April 2019 12:24 PM   |  A+A-


Three Naxals, CRPF jawan dead in Jharkhand encounter

ಸಂಗ್ರಹ ಚಿತ್ರ

Posted By : SVN SVN
Source : ANI
ರಾಂಚಿ: ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಇನ್ನು ಕೇವಲ 2 ದಿನ ಬಾಕಿ ಇರುವಂತೆಯೇ ಅತ್ತ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಜಾರ್ಖಂಡ್ ನ ಗಿರಿಧ್ ಜಿಲ್ಲೆಯ ಬೆಲ್ಭಾ ಘಾಟ್ ಪ್ರದೇಶದಲ್ಲಿ ಇಂದು ಮುಂಜಾನೆ 6 ಗಂಟೆ ಸುಮಾರಿನಲ್ಲಿ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.

ಬೆಲ್ಭಾ ಘಾಟ್ ಪ್ರದೇಶದ ದಟ್ಟಾರಣ್ಯದಲ್ಲಿ ನಕ್ಸಲರು ಅಡಗಿರುವ ಕುರಿತು ಮಾಹಿತಿ ಪಡೆದ ಸಿಆರ್ ಪಿಎಫ್ ನ 7ನೇ ಬೆಟಾಲಿಯನ್ ಪಡೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದೆ. ಈ ವೇಳೆ ಸೈನಿಕರನ್ನು ಕಂಡ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯವ್ವಿ ಮೂವರು ನಕ್ಸಲರು ಹತರಾಗಿದ್ದಾರೆ. ಇನ್ನು ಘಟನೆಯಲ್ಲಿ ಓರ್ವ  ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ.

ಇನ್ನು ಘಟನಾ ಪ್ರದೇಶದಲ್ಲಿ ಸೇನಾಪಡೆಗಳು, ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಂಡಿದ್ದು, ಈ ವೇಳೆ ಎಕೆ 47 ರೈಫಲ್ ಗಳು, ಮೂರು ಬುಲೆಟ್ ಮ್ಯಾಗಜಿನ್ ಗಳು, 4 ಪೈಪ್ ಬಾಂಬ್ ಗಳು ಸೇರಿದಂತೆ ಹಲವು ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಪ್ರದೇಶದಲ್ಲಿ ಈಗಲೂ ಎನ್ಕೌಂಟರ್ ಸಾಗಿದ್ದು, ಪರಾರಿಯಾದ ನಕ್ಸಲರಿಗಾಗಿ ಸೇನೆ ತೀವ್ರ ಶೋಧ ನಡೆಸುತ್ತಿದೆ. 
Stay up to date on all the latest ರಾಷ್ಟ್ರೀಯ news with The Kannadaprabha App. Download now
facebook twitter whatsapp