ಶಬರಿಮಲೆ ಎಫೆಕ್ಟ್: ಮಸೀದಿಗೆ ಮಹಿಳೆ ಪ್ರವೇಶ ಕೋರಿ ಅರ್ಜಿ, ಕೇಂದ್ರ, ಮುಸ್ಲಿಂ ನ್ಯಾಯಮಂಡಳಿಗೆ ಸುಪ್ರೀಂ ನೋಟೀಸ್

ಮುಸ್ಲಿಂ ಮಹಿಳೆಯರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು, ಮುಸ್ಲಿಂ ಮಹಿಳೆಯರಿಗೆ ಮಸೀದಿ ಪ್ರವೇಶಕ್ಕಿರುವ ನಿಷೇಧ ತೆರವಾಗಬೇಕೆಂದು ಕೋರಿ ಸಲ್ಲಿಕೆಯಾಗಿದ್ದ....
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಮುಸ್ಲಿಂ ಮಹಿಳೆಯರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು, ಮುಸ್ಲಿಂ ಮಹಿಳೆಯರಿಗೆ ಮಸೀದಿ ಪ್ರವೇಶಕ್ಕಿರುವ ನಿಷೇಧ ತೆರವಾಗಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿದೆ. ಇದರ ಸಂಬಂಧ ನ್ಯಾಯಾಲಯವು ಕೇಂದ್ರ ಸರ್ಕಾರ, ಕೇಂದ್ರೀಯ ವಕ್ಫ್ ಮಂಡಳಿ, ರಾಷ್ಟ್ರೀಯ ಮಹಿಳಾ ಆಯೋಗ,  ಅಖಿಲ ಬಾರತ  ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗಳಿಗೆ ನೋಟೀಸ್ ಜಾರಿ ಮಾಡಿದೆ.
ಮಹಿಳೆಗೆ ಮಸೀದಿ ಪ್ರವೇಶ ನಿಷೇಧ ಎನ್ನುವುದು ಮಹಿಳೆಯ ಮೂಲಭೂತ ಹಕ್ಕಿನ ಉಲ್ಲಂಘನೆ, ಹಾಗಾಗಿ ಮಹಿಳೆಯರಿಗೆ ಪುರುಷರಂತೆಯೇ ಮಸೀದಿಗೆ ತೆರಳಲು, ಪ್ರಾರ್ಥನೆ ಸಲ್ಲಿಸಲು ಅವಕಾಶ ಒದಗಿಸಬೇಕು. ಮಸೀದಿಗೆ ಮಹಿಳೆ ಪ್ರವೇಶ ನಿಷೇಧ ಎಂಬ ನಿಯಮವನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಪುಣೆ ಮೂಲದ ಮುಸ್ಲಿಂ ದಂಪತಿಗಳು ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮಹಿಳೆಯರಿಗೆ ಸಮಾನ ಮೂಲಭೂತ ಹಕ್ಕು ಇದೆ ಎಂಬ ಹಿನ್ನೆಲೆಯಲ್ಲಿ ಕಳೆದ ವರ್ಷ ಸುಪ್ರೀಂ ಕೋರ್ಟ್ ಕೇರಳದ ಪ್ರಸಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶವಿದೆ ಎಂಬ ಮಹತ್ವದ ತೀರ್ಪು ನೀಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com