ಚುನಾವಣಾ ಆಯೋಗ ಎಚ್ಚೆತ್ತುಕೊಂಡಿದೆ: ಸದ್ಯಕ್ಕೆ ಯಾವುದೇ ಆದೇಶ ಬೇಕಿಲ್ಲ ಎಂದ ಸುಪ್ರೀಂ ಕೋರ್ಟ್!

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕೈಗೊಂಡಿರುವ ಕ್ರಮಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದ್ದು, ಮತ್ತೆ ಹೊಸದಾದ ಯಾವುದೇ ಆದೇಶವೂ ಬೇಕಿಲ್ಲ ಎಂದು
ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಚು. ಆಯೋಗದ ಕ್ರಮ, ಸದ್ಯಕ್ಕೆ ಯಾವುದೇ ಆದೇಶ ಬೇಕಿಲ್ಲ ಎಂದ ಸುಪ್ರೀಂ ಕೋರ್ಟ್!
ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಚು. ಆಯೋಗದ ಕ್ರಮ, ಸದ್ಯಕ್ಕೆ ಯಾವುದೇ ಆದೇಶ ಬೇಕಿಲ್ಲ ಎಂದ ಸುಪ್ರೀಂ ಕೋರ್ಟ್!
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ವಿರುದ್ಧ ಚುನಾವಣಾ ಆಯೋಗ ಕೈಗೊಂಡಿರುವ ಕ್ರಮಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದ್ದು, ಮತ್ತೆ ಹೊಸದಾದ ಯಾವುದೇ ಆದೇಶವೂ ಬೇಕಿಲ್ಲ ಎಂದು ಹೇಳಿದೆ. 
ಚುನಾವಣಾ ಆಯೋಗ ತನ್ನ ಅಧಿಕಾರದ ಬಗ್ಗೆ ಎಚ್ಚೆತ್ತುಕೊಂಡಿದ್ದು, ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮುಂದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕೋಮು, ದ್ವೇಷ ಭಾಷಣ ಮಾಡುವ ರಾಜಕಾರಣಿಗಳ ವಿರುದ್ಧ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಏ.15 ರಂದು ಅಸಮಾಧಾನ ವ್ಯಕ್ತಪಡಿಸಿತ್ತು. 
ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡಿದ್ದ ಚುನಾವಣಾ ಆಯೋಗ, ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದ ಉತ್ತರ ಪ್ರದೇಶದ ಬಿಎಸ್ ಪಿ ನಾಯಕಿ ಮಾಯಾವತಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಕೈಗೊಂಡು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದರಿಂದ ನಿರ್ಬಂಧ ವಿಧಿಸಿತ್ತು. 
ಲೋಕಸಭೆ ಚುನಾವಣೆ ವೇಳೆ ರಾಜಕೀಯ ಪಕ್ಷಗಳ ನಾಯಕರು ನೀಡುವ ಪ್ರಚೋದನಾಕಾರಿ ಹೇಳಿಕೆಗೆಳಿಗೆ ಸಂಬಂಧಿಸಿದಂತೆ ತಾನು ಹಲ್ಲು ಇಲ್ಲದ ಮತ್ತು ಅಧಿಕಾರ ಇಲ್ಲದ ಸಂಸ್ಥೆ ಎಂದು ಚುನಾವಣಾ ಆಯೋಗ ಹೇಳಿತ್ತು. ಈ ನಂತರ ಚುನಾವಣಾ ಆಯೋಗದ ಅಧಿಕಾರವನ್ನು ನಾಳೆ ಬೆಳಗ್ಗೆ 10.30ಕ್ಕೆ ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com