ವ್ಯಾಪಾರ ಮಾರ್ಗಗಳು ದುರ್ಬಳಕೆ: ಎಲ್ ಒಸಿ ಆಚೆಗಿನ ಎಲ್ಲಾ ವ್ಯಾಪಾರ ಭಾರತದಿಂದ ಅಮಾನತು

ಇದೇ 19ರಿಂದ ಜಾರಿಗೆ ಬರುವಂತೆ ಜಮ್ಮು- ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಡುವಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ವ್ಯಾಪಾರ ವಹಿವಾಟನ್ನು ಭಾರತ ಅಮಾನತುಗೊಳಿಸಿದೆ.

Published: 18th April 2019 12:00 PM  |   Last Updated: 18th April 2019 10:20 AM   |  A+A-


Casual Photo

ಸಾಂದರ್ಭಿಕ ಚಿತ್ರ

Posted By : ABN
Source : The New Indian Express
ನವದೆಹಲಿ, ಇದೇ 19ರಿಂದ ಜಾರಿಗೆ ಬರುವಂತೆ ಜಮ್ಮು- ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಡುವಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ವ್ಯಾಪಾರ ವಹಿವಾಟನ್ನು ಭಾರತ ಅಮಾನತುಗೊಳಿಸಿದೆ.

ಪಾಕಿಸ್ತಾನ ಮೂಲದ ಕೆಲ ದುಷ್ಕರ್ಮಿಗಳು ಗಡಿ ನಿಯಂತ್ರಣ ರೇಖೆ ಆಚೆಯಿಂದ ನಡೆಸುವ ವ್ಯಾಪಾರ-ವ್ಯವಹಾರದ ಮಾರ್ಗವನ್ನು ದುರ್ಬಳಕೆ ಮಾಡಿಕೊಂಡು,  ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತುಗಳು, ನಕಲಿ ನೋಟುಗಳು ಇತ್ಯಾದಿಗಳನ್ನು ಸಾಗಣೆ ಮಾಡುತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

 ರಾಷ್ಟ್ರೀಯ ಭದ್ರತಾ ದಳದ ಗಮನಕ್ಕೆ ಬಂದಿರುವ ಪ್ರಕಾರ, ಎಲ್ ಒಸಿ ವ್ಯವಹಾರಗಳನ್ನು ನಡೆಸುತ್ತಿರುವ ವ್ಯಕ್ತಿಗಳು ಭಾರತದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತೆ ಉತ್ತೇಜಿಸುತ್ತಿರುವ ನಿಷೇಧಿತ ಉಗ್ರ ಸಂಘಟನೆಗಳ ಜತೆ ನಂಟು ಹೊಂದಿರುವುದು ಕಂಡುಬಂದಿದೆ. ಆದ್ದರಿಂದ ಜಮ್ಮು- ಕಾಶ್ಮೀರದ ಚಕ್ಕನ್ -ಡಾ ಬಾಗ್ ಮತ್ತು ಸಲಾಮಾಬಾದ್ ಬಳಿ ಎಲ್ ಒಸಿ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದೆ.

ಈ ಮಧ್ಯೆ ಹೊಸ ಆದೇಶವನ್ನು ಕಟ್ಟುನಿಟ್ಟಾಗಿ ಕಾರ್ಯಗತಗೊಳಿಸಲಾಗುವುದು, ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ವ್ಯಾಪಾರ ವಹಿವಾಟನ್ನು ಪುನರ್ ಆರಂಭಿಸುವ ಸಂಬಂಧ ತದನಂತರ ಮರುಪರಿಶೀಲಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ಗಡಿನಿಯಂತ್ರಣ ರೇಖೆ ಆಚೆಯ ವ್ಯಾಪಾರವು ಜಮ್ಮು ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಧ್ಯೆ ಎರಡು ವಾರಗಳ ನಂತರ ಮಂಗಳವಾರವಷ್ಟೇ ಶುರು ಆಗಿತ್ತು. ಏಪ್ರಿಲ್ ಒಂದನೇ ತಾರೀಕು ಗಡಿ ನಿಯಂತ್ರಣ ರೇಖೆ ಬಳಿ ವ್ಯಾಪಾರ, ಪ್ರಯಾಣ ಎಲ್ಲವನ್ನು ಅಮಾನತು ಮಾಡಲಾಗಿತ್ತು.

ಆ ವೇಳೆ ಪಾಕಿಸ್ತಾನದಿಂದ ಭಾರೀ ಪ್ರಮಾಣದಲ್ಲಿ ಶೆಲ್ಲಿಂಗ್ ನಡೆಯುತ್ತಿತ್ತು. ನಿಮ್ಮ ರಾಜಕೀಯ ಜ್ಞಾನವನ್ನು ಒರೆಗೆ ಹಚ್ಚುವ ರಸಪ್ರಶ್ನೆ ಬಿಎಸ್ ಎಫ್ ಅಧಿಕಾರಿ, ಮಹಿಳೆ ಹಾಗೂ ಐದು ವರ್ಷದ ಬಾಲಕಿ ಹೀಗೆ ಮೂವರು ಪೂಂಛ್ ನಲ್ಲಿ ಸಾವನ್ನಪ್ಪಿದ್ದರು. ಪುಲ್ವಾಮಾ ಉಗ್ರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯದ ಸಂಬಂಧ ಹದಗೆಟ್ಟಿದೆ.
Stay up to date on all the latest ರಾಷ್ಟ್ರೀಯ news
Poll
Rahul_Gandhi1

ರಾಹುಲ್ ಗಾಂಧಿ ಟೀಕೆ ಮಾಡುವುದನ್ನು ನಿಲ್ಲಿಸಿ ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಪಕ್ಷವನ್ನು ಸಜ್ಜುಗೊಳಿಸಬೇಕೇ?


Result
ಹೌದು, ರಾಹುಲ್ ಮುಂದಾಳತ್ವ ವಹಿಸಬೇಕು.
ಇಲ್ಲ, ಇದು ಕೇಂದ್ರ ಸರ್ಕಾರದ ಜವಾಬ್ದಾರಿ.
flipboard facebook twitter whatsapp