
ರಾಮ್ ಗೋಪಾಲ್ ವರ್ಮಾ
Source : ANI
ಪಶ್ಚಿಮ ಗೋದಾವರಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ವೈಎಸ್ಆರ್ ಕಾಂಗ್ರೆಸ್ ಸೇರಿದ್ದಾರೆ ಎಂದು ಬರೆದು, ಅವರ ತಿರುಚಿದ ಫೋಟೋವನ್ನು ಫೇಸ್ ಬುಕ್ ನಲ್ಲಿ ಶೇರ್ ಮಾಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಈ ಸಂಬಂಧ ಟಿಡಿಪಿ ಕಾರ್ಯಕರ್ತ ದೇವಿಬಾಬು ಚೌಧರಿ ಅವರು ತಡೆಪಳ್ಳಿ ಗುಡೆಮ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ರಾಮ್ ಗೋಪಾಲ್ ವರ್ಮಾ ಅವರ ವಿರುದ್ಧ ತೆಲಂಗಾಣದಲ್ಲೂ ದೂರು ನೀಡಿದ್ದು, ಚಂದ್ರಬಾಬು ನಾಯ್ಡು ಅವರ ಫೋಟೋವನ್ನು ತಿರುಚುವ ಮೂಲಕ ನಮ್ಮ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಚೌಧರಿ ಆರೋಪಿಸಿದ್ದಾರೆ.
Stay up to date on all the latest ರಾಷ್ಟ್ರೀಯ news