ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ 370 ನೇ ವಿಧಿ ರದ್ದು- ಅಮಿತ್ ಶಾ

ಸಂಸತ್ತಿನ ಉಭಯ ಸದನಗಳಲ್ಲಿ ಬಿಜೆಪಿ ಬಹುಮತ ಪಡೆದ ನಂತರ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ಧರಂಪುರ್ : ಸಂಸತ್ತಿನ ಉಭಯ ಸದನಗಳಲ್ಲಿ ಬಿಜೆಪಿ ಬಹುಮತ ಪಡೆದ ನಂತರ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಗುಜರಾತಿನ ವಾಲ್ಸಾದ್ ಜಿಲ್ಲೆಯ ಧರಂಪುರ್ ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಷ್ಟ್ರೀಯ ಭದ್ರತೆ ಈ ಚುನಾವಣೆಯ ಪ್ರಮುಖ ವಿಚಾರವಾಗಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಈಗಾಗಲೇ ಹೇಳಿರುವಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಕ್ಷ ಬಹುಮತ ಪಡೆದರೆ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲಾಗುವುದು, ಇದರಿಂದ ಕಾಶ್ಮೀರ ಶಾಶ್ವತವಾಗಿ ಭಾರತದ ಅವಿಭಾಜ್ಯ ಅಂಗವಾಗಲಿದೆ ಎಂದರು.

ಪ್ರಸ್ತುತ ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತವಿಲ್ಲ, ವಾಲ್ಸಾದಾ ಬಿಜೆಪಿ ಅಭ್ಯರ್ಥಿ ಕೆ. ಸಿ. ಪಟೇಲ್ ಪರವಾಗಿ ಅಮಿತ್ ಶಾ ಪ್ರಚಾರ ನಡೆಸಿದರು. ಗುಜರಾತಿನ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ಚುನಾವಣೆಯಲ್ಲಿ ನಡೆಯಲಿದೆ. ಇದು ಕೇವಲ ಅಭಿವೃದ್ಧಿ ಬಗ್ಗೆ ಹೋರಾಟವಲ್ಲಾ, ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಅಭಿವೃದ್ಧಿ ಬಗ್ಗೆ ಯಾವುದೇ ಅನುಮಾನವಿಲ್ಲ, ರಾಷ್ಟ್ರೀಯ ಭದ್ರತೆ ಪ್ರಮುಖ ವಿಚಾರವಾಗಿದ್ದು, ಮೋದಿ ಹಾಗೂ ಬಿಜೆಪಿಯಿಂದ ಮಾತ್ರ ಅದು ದೊರೆಯಲು ಸಾಧ್ಯ ಎಂದು ಹೇಳಿದರು.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ವಾಯುಸೇನೆಯಿಂದ ನಡೆದ ಏರ್ ಸ್ಟ್ರೈಕ್ ಬಗ್ಗೆ ಇಡೀ ದೇಶವೇ ಸಂಭ್ರಮಿಸುತ್ತಿದ್ದರೆ, ಕಾಂಗ್ರೆಸ್ ದು: ಖಿಸುತ್ತಿದೆ.ಪಾಕಿಸ್ತಾನ ಏಕೆ ಹತಾಶೆಗೊಂಡಿದೆ ಎಂಬುದು ನಮಗೆ ತಿಳಿದಿದೆ. ಆದರೆ, ಉಗ್ರರು ಹತ್ಯೆಯಾದಾಗ ರಾಹುಲ್ ಗಾಂಧಿ ಪಕ್ಷ ಏಕೆ ದು:ಖಿಸುತಿತ್ತು ಎಂದು ಅಮಿತ್ ಶಾ ಪ್ರಶ್ನಿಸಿದ್ದು, ಮೋದಿಯಿಂದ ಮಾತ್ರ ಭಾರತ ಸೂಪರ್ ಪವರ್ ರಾಷ್ಟ್ರವಾಗಲು ಸಾಧ್ಯ  ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com