ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ, 7 ಸಾವು, 34 ಮಂದಿಗೆ ಗಾಯ

ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 34 ಮಂದಿ ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ಬಸ್
ಅಪಘಾತಕ್ಕೀಡಾದ ಬಸ್
ಲಖನೌ: ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇ  ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 34 ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಬಸ್ ಸರಕು ಸಾಗಣೆ ಟ್ರಕ್ ಗೆ ಢಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 7 ಮಂದಿ ಪ್ರಯಾಣಿಕರು ಸಾವನ್ನಪ್ಪಿ, 34 ಮಂದಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ ಬಸ್ ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ರತ್ರೆಗೆ ದಾಖಲು ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com