ಸ್ವಿಟ್ಜರ್ಲ್ಯಾಂಡ್ ನಲ್ಲಿ ಸಿಎಂ ಕಮಲ್ ನಾಥ್ ವಾಸ್ತವ್ಯಕ್ಕೆ ಮಧ್ಯಪ್ರದೇಶ ಸರ್ಕಾರದಿಂದ 1.58 ಕೋಟಿ ಖರ್ಚು!

ಸಿಟ್ಜರ್ಲ್ಯಾಂಡ್ ನಲ್ಲಿ ಸಿಎಂ ಕಮಲ್ ನಾಥ್ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ವಾಸ್ತವ್ಯಕ್ಕಾಗಿ ಮಧ್ಯಪ್ರದೇಶ ಸರ್ಕಾರದಿಂದ 1.58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ.
ಕಮಲ್ ನಾಥ್
ಕಮಲ್ ನಾಥ್
ಭೋಪಾಲ್: ಸಿಟ್ಜರ್ಲ್ಯಾಂಡ್ ನಲ್ಲಿ ಸಿಎಂ ಕಮಲ್ ನಾಥ್ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ವಾಸ್ತವ್ಯಕ್ಕಾಗಿ ಮಧ್ಯಪ್ರದೇಶ ಸರ್ಕಾರದಿಂದ 1.58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. 
ಆರ್ ಟಿಐ ನಿಂದ ಈ ಮಾಹಿತಿ ಬಹಿರಂಗವಾಗಿದೆ. ಜನವರಿ ತಿಂಗಳಲ್ಲಿ ವರ್ಲ್ಡ್ ಎಕಾನಾಮಿಕ್ ಫೋರಂ ನಲ್ಲಿ ಭಾಗವಹಿಸಲು ಸ್ವಿಟ್ಜರ್ಲ್ಯಾಂಡ್ ನ ದಾವೋಸ್ ಗೆ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್, ರಾಜ್ಯ ಮುಖ್ಯಕಾರ್ಯದರ್ಶಿ ಎಸ್ ಆರ್ ಮೊಹಂತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಅಶೋಕ್ ಬರ್ನ್ವಾಲ್, ಕೈಗಾರಿಕಾ ನೀತಿ ಇಲಾಖೆ ಹಾಗೂ ಹೂಡಿಕೆ ಉತ್ತೇಜನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಲೇಮಾನ್ ತೆರಳಿದ್ದರು. 
ಈ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳ ಪ್ರಯಾಣ ವೆಚ್ಚ, ವಸತಿ ಸೇರಿದಂತೆ ಒಟ್ಟಾರೆ 1.58 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬುದು ಆರ್ ಟಿಐ ಮೂಲಕ ಈಗ ಬಹಿರಂಗವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com