ಭಾರತೀಯ ಸೇನೆಯ ದಾಳಿಗೆ ಹೆದರಿ ಜೈಶ್ ಉಗ್ರ ಸಂಘಟನೆಯ ಮುಂದಾಳತ್ವ ವಹಿಸಿಕೊಳ್ಳಲು ಹೆದರುತ್ತಿದ್ದಾರೆ!

ಪುಲ್ವಾಮಾ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ನಡೆಸಿದ ಎನ್ಕೌಂಟರ್ ಗೆ ಹೆದರಿ ಸಂಘಟನೆಯ ಉಸ್ತುವಾರಿ ವಹಿಸಿಕೊಳ್ಳಲು ಉಗ್ರರು ಹಿಂದೇಟು ಹಾಕುತ್ತಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪುಲ್ವಾಮಾ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ನಡೆಸಿದ ಎನ್ಕೌಂಟರ್ ಗೆ ಹೆದರಿ ಸಂಘಟನೆಯ ಉಸ್ತುವಾರಿ ವಹಿಸಿಕೊಳ್ಳಲು ಉಗ್ರರು ಹಿಂದೇಟು ಹಾಕುತ್ತಿದ್ದಾರೆ ಎಂದು ಭಾರತೀಯ ಸೇನೆ ಹೇಳಿದೆ.
ಪುಲ್ವಾಮಾ ದಾಳಿ ಬಳಿಕ ಇಲ್ಲಿಯವರೆಗೂ 41 ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಲೆಫ್ಟಿನೆಂಟ್ ಜನರಲ್ ಮತ್ತು ಜನರಲ್ ಆಫೀಸರ್ ಕಮಾಂಡಿಂಗ್(ಜಿಓಸಿ) ಕೆಜಿಎಸ್ ದಿಲ್ಲನ್ ತೇಳಿಸಿದ್ದಾರೆ.
ಈ ವರ್ಷದ ಜನವರಿಯಿಂದ ಇವತ್ತಿನವರೆಗೂ 69 ಉಗ್ರರನ್ನು ಹೊಡೆದುರುಳಿಸಲಾಗಿದೆ. 12 ಉಗ್ರರನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ. ಪುಲ್ವಾಮಾ ದಾಳಿ ಬಳಿಕ 41 ಉಗ್ರರನ್ನು ಹತ್ಯೆಗೈಯಲಾಗಿದ್ದು ಇದರಲ್ಲಿ 25 ಜೈಷ್ ಉಗ್ರರು ಮತ್ತು 13 ಪಾಕಿಸ್ತಾನಿಯರು ಸೇರಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com