ತಮಿಳುನಾಡಿಗೆ ಅಪ್ಪಳಿಸಲಿದೆ ಫನಿ ಚಂಡಮಾರುತ, ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಏಪ್ರಿಲ್ 29ರ ವೇಳೆಗೆ ತಮಿಳುನಾಡಿಗೆ ಫನಿ ಚಂಡಮಾರುತ ಅಪ್ಪಳಿಸಲಿದ್ದು, ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ...

Published: 25th April 2019 12:00 PM  |   Last Updated: 25th April 2019 04:59 AM   |  A+A-


Cyclone on course, heavy rains predicted in Chennai by April 29

ಸಾಂದರ್ಭಿಕ ಚಿತ್ರ

Posted By : LSB LSB
Source : The New Indian Express
ಚೆನ್ನೈ: ಏಪ್ರಿಲ್ 29ರ ವೇಳೆಗೆ ತಮಿಳುನಾಡಿಗೆ ಫನಿ ಚಂಡಮಾರುತ ಅಪ್ಪಳಿಸಲಿದ್ದು, ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕಡಿಮೆ ಒತ್ತಡದ ಪರಿಣಾಮ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಬೀಸುತ್ತಿರುವ ಭಾರೀ ಗಾಳಿ ವಾಯುವ್ಯ ಭಾಗದ ಮೂಲಕ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ. 

ತಮಿಳುನಾಡಿನ ದಕ್ಷಿಣ ಮತ್ತು ಒಳನಾಡಿನ ಜಿಲ್ಲೆಗಳು  ಹಾಗೂ ವಿಶೇಷವಾಗಿ ಚೆನ್ನೈ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಈ ಚಂಡಮಾರುತ ತಮಿಳುನಾಡು ಹಾಗೂ ಶ್ರೀಲಂಕಾ ಮೂಲಕ ಚಲಿಸಲಿದೆ. ಪುದುಚೇರಿಯಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನಲ್ಲಿ ಅಧಿಕ ಮಳೆಯಾಗಲಿದೆ.
Stay up to date on all the latest ರಾಷ್ಟ್ರೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp