ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕೆಗಳಲ್ಲಿ ಮಧ್ಯ ಪ್ರವೇಶ ಅಧಿಕಾರ ರಾಜ್ಯಪಾಲರಿಗೆ ಇಲ್ಲ: ಮದ್ರಾಸ್ ಹೈಕೋರ್ಟ್

ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ ಅವರಿಗೆ ಇಲ್ಲ ಎಂದು ಮದ್ರಾಸ್ ಹೈ ಕೋರ್ಟ್ ಹೇಳಿದೆ.
ಪುದುಚೇರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ ಅವರಿಗೆ ಇಲ್ಲ ಎಂದು ಮದ್ರಾಸ್ ಹೈ ಕೋರ್ಟ್ ಹೇಳಿದೆ.
ಪುದುಚೇರಿ ರಾಜ್ಯಪಾಲೆ ಕಿರಣ್ ಬೇಡಿ ಮತ್ತು ಸಿಎಂ ಎನ್ ಎ ನಾರಾಯಣ ಸ್ವಾಮಿ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿದ್ದು, ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲಗಿಲ್ಲ ಎಂದು ಹೇಳಿದೆ.
ಅಂತೆಯೇ ಪುದುಚೇರಿ ಮುಖ್ಯಮಂತ್ರಿಗಳ ಅಧಿಕಾರ ಚಲಾವಣೆಯಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡುವಂತಿಲ್ಲ. ಅಲ್ಲದೆ ಸರ್ಕಾರದಿಂದ ಯಾವುದೇ ರೀತಿಯ ದಾಖಲೆಗಳನ್ನು ರಾಜ್ಯಪಾಲರು ಕೇಳುವ ಅಧಿಕಾರ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಇನ್ನು ಈ ಹಿಂದೆ ಪುದುಚೇರಿ ಸಿಎಂ ಎನ್ ಎ ನಾರಾಯಣ ಸ್ವಾಮಿ ಹಾಗೂ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ನಡುವಿನ ಅಧಿಕಾರ ಕಿತ್ತಾಟ ತಾರಕ್ಕೇರಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನಾರಾಯಣಸ್ವಾಮಿ ಪುದುಚೇರಿ ರಾಜಭವನದ ಮುಂದೆ ತಮ್ಮ ಸಚಿವರು, ಶಾಸಕರೊಂದಿಗೆ ಪ್ರತಿಭಟನೆ ಕೂಡ ನಡೆಸಿದ್ದರು. ಈ ಕುರಿತಂತೆ ಮದ್ರಾಸ್ ಹೈಕೋರ್ಟ್ ನಲ್ಲಿ ಶಾಸಕ ಲಕ್ಷ್ಮೀ ನಾರಾಯಣ್ ಎಂಬುವವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com