ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ ಅವರು, ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಲ್ಕಾರ್ ಸೋಲಾಪುರ್ ವಿಶ್ವವಿದ್ಯಾಲಯದಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಗಡ್ಕರಿ ಅವರು ತಲೆಸುತ್ತು ಬಂದು ಕುರ್ಚಿಮೇಲೆ ಕುಸಿದಿದ್ದಾರೆ.