ಅಯೋಧ್ಯೆ ಭೂ ವಿವಾದ: ಇಂದು 'ಸುಪ್ರೀಂ' ನಿರ್ಧಾರ

ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ.
ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
ಸುಪ್ರೀಂಕೋರ್ಟ್ (ಸಂಗ್ರಹ ಚಿತ್ರ)
ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ. 
ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ರಚಿಸಲಾಗಿದ್ದ 3 ಸದಸ್ಯರ ಸಮಿತಿ ತನ್ನ ವರದಿಯನ್ನು ನಿನ್ನೆಯಷ್ಟೇ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಕೋರ್ಟ್'ಗೆ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠವು ಇಂದು ಕೈಗೆತ್ತಿಕೊಳ್ಳಲಿದ್ದು, ವಿವಾದಕ್ಕೆ ಇತ್ಯರ್ಥಕ್ಕೆ ಸಂಧಾನ ಮಾರ್ಗವನ್ನೇ ಮುಂದುವರೆಸಬೇಕೋ ಅಥವಾ ವಿಚಾರಣೆ ಮೂಲಕ ತಾನೇ ಇತ್ಯರ್ಥ ಪಡಿಸಬೇಕೋ ಎಂಬುದನ್ನು ನಿರ್ಧರಿಸಲಿದೆ. 
ಅಯೋಧಅಯೆ ವಿವಾದವನ್ನು ಸಂವಿಧಾನದ ಮೂಲಕ ಇತ್ಯರ್ಥಪಡಿಸುವ ಕುರಿತು ವರದಿ ನೀಡಲು ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಖಲೀಫುಲ್ಲಾ ನೇತೃತ್ವದ ಮೂವರು ಸದಸ್ಯರ ಸಮಿತಿಯನ್ನು ಈ ಹಿಂದೆ ಸ್ವತಃ ಸುಪ್ರೀಂಕೋರ್ಟ್ ರಚಿಸಿತ್ತು. ಅದಕ್ಕೆ ವರದಿ ನೀಡಲು 3 ತಿಂಗಳು ಕಾಲಾವಕಾಶ ನೀಡಲಾಗಿತ್ತು. ಅದರಂತೆ ಸಮಿತಿ ಈ ಹಿಂದೆ ತನ್ನ ಮೊದಲ ವರದಿಯನ್ನು ಸಲ್ಲಿಸಿತ್ತು. ವರದಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದ ಸುಪ್ರೀಂಕೋರ್ಟ್ ಜು.18ರಂದು ಸಮಿತಿಗೆ ಮತ್ತಷ್ಟು ಕಾಲಾವಕಾಶ ಕಲ್ಪಿಸಿ ಜು.31ರಂದು ಸಂಧಾನದ ಸ್ಥಿತಿಗತಿ ವರದಿಯನ್ನು ತನಗೆ ಸಲ್ಲಿಸುವಂತೆ ಸೂಚಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com