ಶೋಪಿಯಾನ್'ನಲ್ಲಿ ಎನ್'ಕೌಂಟರ್: ಓರ್ವ ಯೋಧ ಹುತಾತ್ಮ

ದಕ್ಷಿಣ ಕಾಶ್ಮೀರದ ಶೋಪಿಯಾನ್'ನಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಯೋಧ ಹುತಾತ್ಮರಾಗಿ ಮತ್ತೋರ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್'ನಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಯೋಧ ಹುತಾತ್ಮರಾಗಿ ಮತ್ತೋರ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. 
ಶೋಪಿಯಾನ್ ಜಿಲ್ಲೆಯ ಪಂಡುಶಾನ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಆಧಾರದ ಮೇಲೆ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ 14 ಬೆಟಾಲಿಯನ್ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. 
ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸಲು ಆರಂಭಿಸಿದ್ದು, ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿ ಮತ್ತೋರ್ವರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ಕಳೆದ ಶನಿವಾರವಷ್ಟೇ ಶೋಪಿಯಾನ್'ನ ಬೊನ್ಬಜಾರ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com