ಕಾಶ್ಮೀರ ಭದ್ರತಾ ಬಿಕ್ಕಟ್ಟು: ಅಜಿತ್ ದೋವಲ್ ಮತ್ತು ಗೃಹ ಕಾರ್ಯದರ್ಶಿಯವರನ್ನು ಭೇಟಿ ಮಾಡಿದ ಅಮಿತ್ ಶಾ

ಜಮ್ಮು-ಕಾಶ್ಮೀರದಲ್ಲಿನ ಭದ್ರತಾ ಸ್ಥಿತಿಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸತ್ತಿನಲ್ಲಿ...
ಅಮಿತ್ ಶಾ
ಅಮಿತ್ ಶಾ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿನ ಭದ್ರತಾ ಸ್ಥಿತಿಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಂಸತ್ತಿನಲ್ಲಿ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭೇಟಿ ಮಾಡಿ ಮಾತುಕತೆ ನಡೆಸಿದರು.
ನಾಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರ ಮೀಸಲಾತಿ(ಎರಡನೇ ತಿದ್ದುಪಡಿ)ಮಸೂದೆಯನ್ನು ಮಂಡಿಸಲು ಸಜ್ಜಾಗಿದ್ದು, ರಾಜ್ಯದಲ್ಲಿನ ಅನಿಶ್ಚಿತತೆ ಮಧ್ಯೆ ಅಲ್ಲಿಗೆ ಭೇಟಿ ನೀಡಲು ಮುಂದಾಗಿದ್ದಾರೆ. 
ಸಂಸತ್ತಿನ ಕಲಾಪ ಮುಗಿದ ನಂತರ ಅಮಿತ್ ಶಾ ಅವರು ಮೊದಲು ಜಮ್ಮುವಿಗೆ ನಂತರ ಕಾಶ್ಮೀರ ಕಣಿವೆಗೆ ಭೇಟಿ ನೀಡಲಿದ್ದು ಈ ಕುರಿತು ವಿವರಗಳನ್ನು ಸಿದ್ದಪಡಿಸಲಾಗುತ್ತಿದೆ.
ಸಾಂವಿಧಾನಿಕ ಪರಿಚ್ಛೇದಗಳನ್ನು ಯಾವುದೇ ರೀತಿಯಲ್ಲಿ ಬದಲಾವಣೆ ಮಾಡುವ ಪ್ರಸ್ತಾಪ ರಾಜ್ಯದ ಮುಂದಿಲ್ಲ, ಕೇವಲ ಭದ್ರತಾ ಕಾರಣಗಳಿಗೆ ಮಾತ್ರ ಕಣಿವೆ ರಾಜ್ಯದಲ್ಲಿ ಹೆಚ್ಚುವರಿ ಪಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ ಎಂದು ನಿನ್ನೆ ನ್ಯಾಷನಲ್ ಕಾನ್ಫರೆನ್ಸ್ ನಿಯೋಗಕ್ಕೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಭರವಸೆ ನೀಡಿದ ನಂತರ ಕೇಂದ್ರ ಸರ್ಕಾರದಲ್ಲಿ ಈ ಬೆಳವಣಿಗೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com