ಉನ್ನಾವ್ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕ ಸೆಂಗಾರ್ ದೆಹಲಿಯ ತಿಹಾರ್ ಜೈಲಿಗೆ ಸ್ಥಳಾಂತರ

ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಮತ್ತು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಹಾಗೂ ಸಹ...

Published: 05th August 2019 12:00 PM  |   Last Updated: 05th August 2019 04:44 AM   |  A+A-


Delhi court directs Sengar be shifted to Tihar jail

ಕುಲದೀಪ್ ಸಿಂಗ್ ಸೆಂಗಾರ್

Posted By : LSB
Source : PTI
ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ ಮತ್ತು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಹಾಗೂ ಸಹ ಆರೋಪಿ ಶಶಿ ಸಿಂಗ್ ಅವರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸುವಂತೆ ದೆಹಲಿ ಕೋರ್ಟ್ ಸೋಮವಾರ ಆದೇಶಿಸಿದೆ.

ಈ ಇಬ್ಬರು ಆರೋಪಿಗಳನ್ನು ಭಾನುವಾರ ರಾತ್ರಿ ಬಿಗಿ ಭದ್ರತೆಯ ನಡುವೆ ಉತ್ತರ ಪ್ರದೇಶದಿಂದ ದೆಹಲಿಗೆ ಕರೆತರಲಾಗಿತ್ತು. ಇಂದು ಆರೋಪಿಗಳ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಧರ್ಮೇಶ್ ಶರ್ಮಾ ಅವರು, ಕುಲದೀಪ್ ಸಿಂಗ್ ಸೆಂಗಾರ್ ಹಾಗೂ ಶಶಿ ಸಿಂಗ್ ಅವರನ್ನು ತಿವಾರ್ ಜೈಲಿಗೆ ಸ್ಥಳಾಂತರಿಸುವಂತೆ ಆದೇಶಿಸಿ, ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿದರು.

ಉನ್ನಾವ್ ಅತ್ಯಾಚಾರಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳನ್ನು ಇತ್ತೀಚಿಗೆ ದೆಹಲಿಗೆ ವರ್ಗಾಯಿಸಲಾಗಿದ್ದು, ತೀಸ್ ಹಜಾರಿ ಕೋರ್ಟ್ ವಿಚಾರಣೆ ನಡೆಯುತ್ತಿದೆ.

ಕಳೆದ ಭಾನುವಾರ ಅತ್ಯಾಚಾರ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದು, ಸಂತ್ರಸ್ತೆ ಹಾಗೂ ಆಕೆಯ ವಕೀಲ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ.

Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp