ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ, ಕಾಶ್ಮೀರ ಹೊತ್ತಿ ಉರಿಯಲಿದೆ: ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆತಂಕ

ಕಲಂ 370ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ, ಕಾಶ್ಮೀರ ಹೊತ್ತಿ ಉರಿಯಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಕಲಂ 370ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ, ಕಾಶ್ಮೀರ ಹೊತ್ತಿ ಉರಿಯಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಅತ್ತ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ ಮಂಡಿಸುತ್ತಿದ್ದಂತೆಯೇ ಅತ್ತ ತಮ್ಮ ನಿವಾಸದಿಂದಲೇ ಈ ಕುರಿತಂತೆ ಟ್ವೀಟ್ ಮಾಡಿರುವ ಮುಫ್ತಿ ಮೆಹಬೂಬಾ, ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ, ಕಾಶ್ಮೀರ ಹೊತ್ತಿ ಉರಿಯಲಿದೆ ಎಂದು ಹೇಳಿದ್ದಾರೆ.
'ಇದು ಸಂವಿಧಾನದ ಕತ್ತಲ ದಿನ. ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ. ಕಾಶ್ಮೀರದ ಜನರಿಗೆ ಭಾರತೀಯರು ಕೊಟ್ಟಿದ್ದ ಮಾತು ಭರವಸೆಯನ್ನು ಹಿಂಪಡೆದ ದಿನ. ಸಂವಿಧಾನದ 370ನೇ ವಿಧಿಯನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವು ಅನೈತಿಕ ಮತ್ತು ಸಂವಿಧಾನಬಾಹಿರ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತವು ಒಂದು ಆಕ್ರಮಣಕಾರಿ ಬಲವಾಗಿ ಮಾತ್ರ ಉಳಿದುಕೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದ ಜನರಲ್ಲಿ ಭೀತಿ ಹುಟ್ಟಿಸುವ ಮೂಲಕ ಅಲ್ಲಿನ ಭೂಪ್ರದೇಶವನ್ನು ವಶಪಡಿಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ನನ್ನಂತಹ ಲಕ್ಷಾಂತರ ಮಂದಿ ಭಾರತೀಯ ಸಂಸತ್ ಮೇಲೆ ಇಟ್ಟಿದ್ದ ಭರವಸೆ, ನಂಬಿಕೆಯನ್ನು ವಂಚಿಸಲಾಗಿದೆ. ಕಲಂ 370 ರದ್ಧತಿಯ ಮೂಲಕ ಭಾರತ ವಿಶ್ವಸಂಸ್ಥೆಯನ್ನೂ ವಂಚಿಸಿದೆ. ಈಗಾಗಲೇ ನಮ್ಮನ್ನು ಗೃಹಬಂಧನದಲ್ಲಿರಿಸಲಾಗಿದೆ. ಕನಿಷ್ಠ ಪಕ್ಷ ಮನೆಯ ಅತಿಥಿಗಳಿಗೂ ಪ್ರವೇಶ ಇಲ್ಲದಂತಾಗಿದೆ. ಇನ್ನೂ ಎಷ್ಟು ದಿನ ಹೀಗೆಯೇ ಮುಂದುವರೆಯುತ್ತದೆ ಎಂದು ಗೊತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com