ಉನ್ನಾವ್ ಅತ್ಯಾಚಾರ ಸಂತ್ರಸ್ತೆಯನ್ನು ದೆಹಲಿಗೆ ಏರ್ ಲಿಫ್ಟ್ ಮಾಡಿ: ಸುಪ್ರೀಂ ಆದೇಶ

ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉನ್ಮಾವೊ ಅತ್ಯಾಚಾರ ಸಂತ್ರಸ್ತೆಯನ್ನು ಉತ್ತಮ ಚಿಕಿತ್ಸೆಗಾಗಿ ದೆಹಲಿಗೆ ಏರ್ ಲಿಫ್ಟ್ ಮಾಡುವಂತೆ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉನ್ಮಾವೊ ಅತ್ಯಾಚಾರ ಸಂತ್ರಸ್ತೆಯನ್ನು ಉತ್ತಮ ಚಿಕಿತ್ಸೆಗಾಗಿ ದೆಹಲಿಗೆ ಏರ್ ಲಿಫ್ಟ್ ಮಾಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ಅಂತ್ಯಾಚಾರ ಸಂತ್ರಸ್ತೆಯ ತಾಯಿ, ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತನ್ನ ಮಗಳನ್ನು ಉತ್ತಮ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ದಾಖಲಿಸಬೇಕು ಎಂದು ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಅನಿರುದ್ಧ ಬೋಸ್ ಅವರು, ಅತ್ಯಾಚಾರ ಸಂತ್ರಸ್ತೆಯನ್ನು ಲಖನೌನ ಕಿಂಗ್ ಜಾರ್ಜ್ ಆಸ್ಪತ್ರೆಯಿಂದ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮಾಡುವಂತೆ ಆದೇಶಿಸಿ, ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ.
ಕಳೆದ ಭಾನುವಾರ ಅತ್ಯಾಚಾರ ಸಂತ್ರಸ್ತೆಯ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದ ಇಬ್ಬರು ಮೃತಪಟ್ಟಿದ್ದು, ಸಂತ್ರಸ್ತೆ ಹಾಗೂ ಆಕೆಯ ವಕೀಲ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com