370ನೇ ವಿಧಿ ರದ್ದು ಪ್ರಜಾಪ್ರಭುತ್ವದ ಮೇಲೆ ಸರ್ಜಿಕಲ್ ಸ್ಟ್ರೈಕ್: ಕಮಲ್ ಹಾಸನ್

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.
ಕಮಲ್ ಹಾಸನ್
ಕಮಲ್ ಹಾಸನ್
ಚೆನ್ನೈ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲಾಗಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್ ಅನ್ನು ಬೇರ್ಪಡಿಸಿ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದ ಸ್ಪಷ್ಟ ದಾಳಿ ಎಂದು ಮಕ್ಕಳ್ ನಿಧಿ ಮೈಯಂ ಪಕ್ಷ(ಎಂಎನ್ಎಂ)ದ ಸ್ಥಾಪಕ ಕಮಲ್ ಹಾಸನ್ ಹೇಳಿದ್ದಾರೆ. 
ಇದು ಅತ್ಯಂತ ಆಘಾತಕಾರಿ ಹಾಗೂ ನಿರಂಕುಶಾಧಿಕಾರತ್ವ. 370ನೇ ವಿಧಿ ಮತ್ತು 35ಎ ತನ್ನದೇ ಆದ ಮೂಲ ಹೊಂದಿದೆ. ಪ್ರತಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಮೂಲಕ ಬಲವಂತವಾಗಿ ವಿರೋಧ ಪಕ್ಷಗಳ ಬಾಯನ್ನು ಮುಚ್ಚಿಸಿ ಮಸೂದೆ ಪಾಸ್ ಮಾಡಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com