ಫಾರೂಖ್ ಅಬ್ದುಲ್ಲಾ ಬಂಧನವಾಗಿಲ್ಲ- ಕೇಂದ್ರ ಗೃಹ ಸಚಿವ ಅಮಿತ್ ಶಾ

ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ.
ಅಮಿತ್ ಶಾ
ಅಮಿತ್ ಶಾ
ನವ ದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ  ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ.
ಜಮ್ಮು- ಕಾಶ್ಮೀರ ಪುನರ್ ರಚನೆ ಮಸೂದೆ 2019ರ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪಾರೂಖ್ ಅಬ್ದುಲ್ಲಾ ಏಲ್ಲಿ, ಅವರನ್ನು ದೇಶ ನೋಡಬಯಸುತ್ತಿದೆ ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು.
ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಹಾಗೂ ಮತ್ತಿತರ ನಾಯಕರನ್ನು ಏಕೆ ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಅಧೀರ್ ರಂಜನ್ ಚೌದರಿ ಹೇಳಿದರು. 
ಫಾರೂಖ್ ಅಬ್ದುಲ್ಲಾ ನಾಪತ್ತೆಯಾಗಿದ್ದಾರೆ. ಇದಕ್ಕೆ ಗೃಹ ಸಚಿವರೆ ಹೊಣೆ ಹೊರಬೇಕಾಗುತ್ತದೆ. ಅವರು ಏಲ್ಲಿದ್ದಾರೆ ಎಂಬುದನ್ನು ಸದನಕ್ಕೆ ತಿಳಿಸಬೇಕಾಗಿದೆ. ಅವರ ಬಗ್ಗೆ ಸದನಕ್ಕೆ ಗೊತ್ತಾಗಬೇಕಾಗಿದೆ ಎಂದು ಡಿಎಂಕೆ ಮುಖಂಡ ದಯಾನಿದಿ ಮಾರನ್ ಒತ್ತಾಯಿಸಿದರು.
ನನ್ನ ಪಕ್ಕದ ಆಸನದ ಸಂಖ್ಯೆ 461 ರಲ್ಲಿ ಕೂರುತ್ತಿದ್ದ ಜಮ್ಮು- ಕಾಶ್ಮೀರದ ಸಂಸದ ಫಾರೂಖ್ ಅಬ್ದುಲ್ಲಾ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ ಎಂದು ಎನ್ ಸಿಪಿ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಹೇಳಿದರು. 
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿಯೂ ಇಲ್ಲ ಅಥವಾ ವಶಕ್ಕೆ ಪಡೆದುಕೊಂಡಿಲ್ಲ. ಅವರ ಮನೆಯಲ್ಲಿ ಮುಕ್ತವಾಗಿ ಇದ್ದಾರೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com