ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಮುಖಂಡನಿಗೆ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳದ ಆಡಳಿರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖಂಡನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮುರ್ಷಿದಾಬಾದ್....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೋಲ್ಕತಾ: ಪಶ್ಚಿಮ ಬಂಗಾಳದ ಆಡಳಿರೂಢ ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖಂಡನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಟಿಎಂಸಿಯ ಪಂಚಾಯ್ ಸಮಿತಿ ಸದಸ್ಯರಾಗಿದ್ದ 40 ವರ್ಷದ ಜಹಾಂಗೀರ್ ಶೇಖ್ ಅವರನ್ನು ಕೆಲ ದುಷ್ಕರ್ಮಿಗಳು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಖ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕಂಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಟಿಎಂಸಿ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ನಮಗೆ ಇದುವರೆಗೂ ಯಾವುದೇ ಲಿಖಿತ ದೂರು ಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಇದು ರಾಜಕೀಯ ಪ್ರೇರಿತ ಹತ್ಯೆಯೋ ಅಥವಾ ವೈಯಕ್ತಿಕ ದ್ವೇಷದಿಂದ ನಡೆದ ಕೊಲೆಯೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com